ಪ್ರಯಾಗ್‌ರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಸೋಮವಾರ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ.


ಬೆಳಗ್ಗೆ ಪ್ರಯಾಗ್‌ರಾಜ್‌ಗೆ ಬಂದಿಳಿದ ಮುರ್ಮು ಅವರನ್ನು ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬರಮಾಡಿಕೊಂಡರು. ಅಲ್ಲಿಂದ ನೇರವಾಗಿ ಮಹಾಕುಂಭ ಪ್ರದೇಶಕ್ಕೆ ತೆರಳಿದ ರಾಷ್ಟ್ರಪತಿ ಮುರ್ಮು, ತ್ರಿವೇಣಿ ಸಂಗಮಕ್ಕೆ ಆಗಮಿಸಿ ಪವಿತ್ರ ಸ್ನಾನ ಕೈಗೊಂಡರು.
ತದನಂತರ ಅವರು ಅಕ್ಷಯವಾಟ್ ಮತ್ತು ಬಡೇ ಹನುಮಾನ್ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುರ್ಮು ಅವರಿಗೆ ಸಾಥ್ ನೀಡಿದರು. ಜನವರಿ 13ರಿಂದ ಆರಂಭವಾಗಿರುವ ಮಹಾಕುಂಭಮೇಳ ಫೆಬ್ರವರಿ 26ರವರೆಗೆ ನಡೆಯಲಿದೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾದಲ್ಲಿ ಮೋದಿಯ ಸಪ್ತ ಸೂತ್ರದ ಸಲಹೆ..
50 ಕೋಟಿ ಮಂದಿ ಪುಣ್ಯಸ್ನಾನ ಸಾಧ್ಯತೆ
ಈ ಬಾರಿಯ ಮಹಾಕುಂಭಮೇಳದಲ್ಲಿ ಇದುವರೆಗೆ 42 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ ಮಾಡಿದ್ದಾರೆ. ಜ.13ರಿಂದ ಆರಂಭವಾದ ಕುಂಭಮೇಳದಲ್ಲಿ ಫೆ.8ರವರೆಗಿನ ಮಾ