ಮೈಸೂರು: ಅರಮನೆ ನಗರಿ ಮೈಸೂರಲ್ಲಿ ಡ್ರಗ್ಸ್ ಜಾಲದ ಬೆನ್ನು ಹತ್ತಿರುವ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಲ್ಯೂಷನ್ ಟ್ಯೂಬ್ ಗಳು, ಗಾಂಜಾ ವಶಕ್ಕೆ ಪಡೆದ ಪೊಲೀಸರು ರಾಘವೇಂದ್ರ ನಗರದಲ್ಲಿ ಓರ್ವ ಆರೋಪಿಯನ್ನು ಹಾಗೂ ಇತರೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದಾರೆ.
ಗಾಂಜಾ ಸೇವನೆ ಮಾಡಿತ್ತಿದ್ದ 23 ಮಂದಿಯನ್ನು ಬಂಧನ ಮಾಡಲಾಗಿದ್ದು, 967 ಗ್ರಾಂ ಗಾಂಜಾ, ಐದು ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ಮಹಾರಾಷ್ಟ್ರ ಪೊಲೀಸರ ದಾಳಿ ಬಳಿಕ ಮೈಸೂರಿನ ನಗರ ಪೊಲೀಸರು ಅಲರ್ಟ್ ಆಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.



















