ಕೇರಳ ಪೊಲೀಸರಿಂದ ಡ್ರಗ್ಸ್ ಪೆಡ್ಲರ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
ಬಂಧಿತ ಆರೋಪಿ ನಂಜನಗೂಡಿನಲ್ಲಿ 6 ತಿಂಗಳಿನಿಂದ ವಾಸವಿದ್ದನು. ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೋಗ್ಯಕ್ಕೆ ಜಮೀನು ಪಡೆದುಕೊಂಡಿದ್ದನು.ಕೇರಳ ಪೊಲೀಸರು ಆರೋಪಿಯಿಂದ 803 ಗ್ರಾಂ ಹ್ಯಾಶಿಕ್ ಆಯಿಲ್ ಮತ್ತು 7,780 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.
ಈ ಮಾದಕ ವಸ್ತುಗಳನ್ನು ಬೆಂಗಳೂರಿನಿಂದ ಖರೀದಿಸಿ ಕೇರಳಕ್ಕೆ ಸಾಗಿಸುತ್ತಿದ್ದ ಎಂದು ಎಫ್ಐಆರ್ ದಾಖಲಾಗಿದೆ. ಆರೋಪಿಯ ತೋಟದಲ್ಲಿ ಏನೂ ಪತ್ತೆಯಾಗಿಲ್ಲ. ಈ ಸಂಬಂಧ ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















