ಕೋಲಾರ : ಜಿಲ್ಲೆಯ ಕೆಜಿಎಫ್ ನಗರದಲ್ಲಿ ಡ್ರಗ್ ಪೆಡ್ಲರ್ ಒಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಜೋನಸ್ (34) ಎಂಬಾತ ಕೂಲ್ ಡ್ರಿಂಕ್ಸ್‌ನಲ್ಲಿ ಇಲಿ ಪಾಷಾಣ ಬೆರೆಸಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಆತ್ಮಹತ್ಯೆಗೆ ಯತ್ನಿಸುವ ಮೊದಲು ಜೋನಸ್ ಸೆಲ್ಫಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡಿದ್ದಾನೆ. ವಿಡಿಯೋದಲ್ಲಿ ಪೊಲೀಸರಿಂದ ಆಗುತ್ತಿರುವ ಒತ್ತಡದ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾನೆ.
ಕೆಜಿಎಫ್ ಕ್ರೈಂ ಪೊಲೀಸ್ ಪೇದೆ ಮಗೇಂದ್ರ ತಮ್ಮ ಮೇಲೆ ನಿರಂತರ ಒತ್ತಡ ಹಾಕುತ್ತಿದ್ದಾರೆ ಎಂದು ಜೋನಸ್ ವಿಡಿಯೋದಲ್ಲಿ ಆರೋಪಿಸಿದ್ದಾನೆ. ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚಲು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಿದ್ದಾನೆ.
“ನಾನು ಈ ಲೋಕದಿಂದ ಹೋಗುತ್ತಿದ್ದೇನೆ, ಅಪ್ಪ-ಅಮ್ಮ ಕ್ಷಮಿಸಿ” ಎಂದು ಜೋನಸ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಸ್ವಸ್ಥಗೊಂಡ ಜೋನಸ್‌ನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇಲಿ ಪಾಷಾಣ ಸೇವಿಸಿದ್ದ ಜೋನಸ್ ಅನ್ನು ಕೋಲಾರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ
ಇದನ್ನೂ ಓದಿ : ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು!


















