ಬೆಂಗಳೂರು : ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಡೆಯುವ, ಪೆಡ್ಲರ್ಗಳು ಸಿಕ್ಕಿ ಬೀಳುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಇದೀಗ ನಗರದಲ್ಲಿ ನಂದಿನಿ ಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.
ಸೌಗೇಶ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 5.75 ಕೋಟಿ ರೂ.ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ವಿದೇಶದಿಂದ ಈ ಹೈಡ್ರೋ ಗಾಂಜಾವನ್ನು ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ. ಕೇರಳದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಇವರ ಮೇಲೆ ಈ ಹಿಂದೆಯೇ ಅಲ್ಲಿನ ಎನ್ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ನಂದಿನಿ ಲೇಔಟ್ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ : ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!



















