ಬೆಂಗಳೂರೂ : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟ ಮಾಡುತ್ತಿದ್ದ ಆರೋಪ ಸಂಬಂಧ ಶಿವಾಜಿನಗರದ ನಿವಾಸಿ ಸೈಯದ್ ಸಜ್ಜಾದ್ (50)ರನ್ನು ಡಿಜೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಡಿಜೆ ಹಳ್ಳಿ ಠಾಣೆ ವ್ಯಾಪ್ತಿಯ ಅಂಬೇಡ್ಕರ್ ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಕೊಕೇನ್ ಮಾರಾಟ ಮಾಡಲು ಮುಂದಾಗಿದ್ದ ವೇಳೆ ಪೊಲೀಸರಿಗೆ ಪಕ್ಕಾ ಮಾಹಿತಿ ಲಭ್ಯವಾಗಿತ್ತು. ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರಿಗೆ 1 ಕೆಜಿ 100 ಗ್ರಾಂ ಕೊಕೇನ್ ಸಿಕ್ಕಿದ್ದು, ಕೂಡಲೇ ಆರೋಪಿ ವಿರುದ್ದ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ.
ಇದನ್ನೂ ಓದಿ : ಆಟೋ ಚಾಲಕರ ಕಣ್ಣೀರಿಗೆ ಮಿಡಿದ ನಟ ವಿನೋದ್ ರಾಜ್



















