ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಚಂದನವನದ ಬೆಡಗಿಯರ ಡ್ರಗ್ಸ್ ಪ್ರಕರಣದಲ್ಲಿ (Sandalwood Drugs Case) ನಟಿ ಸಂಜನಾ ಗಲ್ರಾನಿ (Sanjjanaa Galrani)ಗೆ ಬಿಗ್ ರಿಲೀಫ್ ಸಿಕ್ಕಿದೆ.
ಸಂಜನಾ ಅಷ್ಟೇ ಅಲ್ಲದೇ, ಶಿವಪ್ರಕಾಶ್ ಚಿಪ್ಪಿಗೆ ಕೂಡ ಬಿಗ್ ರಿಲೀಫ್ ಸಿಕ್ಕಿದೆ. ಇವರಿಬ್ಬರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ನ್ನು ಹೈಕೋರ್ಟ್ ರದ್ದು ಮಾಡಿದೆ.

ಸಿಸಿಬಿಯಿಂದ (CCB) ನಟಿಯರು ಸೇರಿದಂತೆ ಡ್ರಗ್ ಪೆಡ್ಲರ್ ಗಳ ಬಂಧನವಾಗಿತ್ತು. ಎಫ್‌ಐಆರ್ (FIR) ರದ್ದು ಕೋರಿ ಸಂಜನಾ ಹಾಗೂ ಶಿವಪ್ರಕಾಶ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ (High Court) ಏಕಸದಸ್ಯ ಪೀಠ ಎಫ್ ಐಆರ್ ರದ್ದುಗೊಳಿಸಿ ಆದೇಶಿಸಿದೆ. ಮಾದಕ ಜಾಲದ ನಂಟಿರುವ ಆರೋಪದ ಹಿನ್ನೆಲೆಯಲ್ಲಿ 2020ರ ಸೆಪ್ಟೆಂಬರ್‌ನಲ್ಲಿ ಸಂಜನಾ ಗಲ್ರಾಣಿ ಮನೆಯ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
