ಬೆಂಗಳೂರು: ಡಿಆರ್ ಐ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, 8.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಫುಡ್ ಕಿಟ್ ನಲ್ಲಿಟ್ಟು (Food Kit) ಸಾಗಿಸುತ್ತಿದ್ದ 8.5 ಕೋಟಿ ರೂ. ಮೌಲ್ಯದ ಡ್ರಗ್ಸ್ ನ್ನು ಅಧಿಕಾರಿಗಳು(DRI Officials) ವಶಕ್ಕೆ ಪಡೆದಿದ್ದಾರೆ. ನಗರದಲ್ಲಿ ಆರೋಪಿಗಳನ್ನು (Bengaluru) ವಶಕ್ಕೆ ನಡೆದಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ನೈಜೀರಿಯಾ ಯುವತಿ ಮಕ್ಕಳ ಆಹಾರದ ಕಿಟ್ ನಲ್ಲಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸಿದ್ದಳು. 4.5 ಕೆಜಿಯ ಡ್ರಗ್ಸ್ ನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜೀರಿಯಾ ಯುವತಿಯನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದು, 14 ದಿನ ಕಸ್ಟಡಿಗೆ ಪಡೆದಿದ್ದಾರೆ.


















