ಬೆಂಗಳೂರು: ಇಲ್ಲಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ಡಿಆರ್‌ಐ (Directorate of Revenue Intelligence) ಅಧಿಕಾರಿಗಳು ಬರೋಬ್ಬರಿ 38.4 ಕೋಟಿ ರೂ. ಮೌಲ್ಯದ 3.2 ಕೆಜಿ ಕೊಕೇನ್ ನ್ನು ವಶಕ್ಕೆ ಪಡೆದಿದ್ದಾರೆ.
ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾನಾ ಮೂಲದ ಜೆನ್ನಿಫರ್ ಅಬ್ಬೇ ಎಂಬ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಕತಾರ್ ನ ದೋಹಾದಿಂದ ಬೆಂಗಳೂರಿಗೆ ಬಂದಿಳಿದ ಜೆನ್ನಿಫರ್ ಅಬ್ಬೆ, ಅಕ್ರಮವಾಗಿ ಕೊಕೇನ್ ಸಾಗಿಸಲು ಯತ್ನಿಸಿದ್ದಳು ಎನ್ನಲಾಗಿದೆ. ಡಿಆಪ್‌ಐ ಅಧಿಕಾರಿಗಳು, ಮಹಿಳೆಯನ್ನು ತೀವ್ರವಾಗಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈಗ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರಿನಲ್ಲಿ ಇತ್ತೀಚೆಗಷ್ಟೇ 78 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು. ದಕ್ಷಿಣ ಆಫ್ರಿಕಾದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೆ ಇಂತಹುದೇ ಪ್ರಕರಣ ಬೆಳಕಿಗೆ ಬಂದಿದೆ.