ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಡ್ರಂಗ್ ಆಂಡ್ ಡ್ರೈವ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಅಲ್ಲದೇ, ಶಾಲಾ ವಾಹನ ಚಾಲಕರು ಕೂಡ ಮದ್ಯ ಸೇವಿಸಿ ಬಸ್ ಚಲಾಯಿಸುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗುತ್ತಿದೆ.
ನಗರದಲ್ಲಿ 10 ತಿಂಗಳ ಅವಧಿಯಲ್ಲಿ 118 ಶಾಲಾ ವಾಹನ ಚಾಲಕರ ವಿರುದ್ಧ ಡ್ರಂಕ್ & ಡ್ರೈವ್ (Drunk & Drive) ಕೇಸ್ ದಾಖಲಾಗಿರುವ ಅಂಕಿ ಅಂಶ ಬೆಳಕಿಗೆ ಬಂದಿದೆ. ಇದನ್ನು ಕೇಳಿ ಪಾಲಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಮಕ್ಕಳ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಶಾಲಾ ವಾಹನವನ್ನು ಮದ್ಯ ಸೇವಿಸಿ ಚಲಾಯಿಸುತ್ತಿದ್ದ ಪ್ರಕರಣಗಳು ಜನವರಿಯಲ್ಲಿ 16, ಫೆಬ್ರವರಿಯಲ್ಲಿ 7, ಜುಲೈನಲ್ಲಿ 23, ಆಗಸ್ಟ್ನಲ್ಲಿ 26, ಸೆಪ್ಟೆಂಬರ್ನಲ್ಲಿ 22, ನವೆಂಬರ್ನಲ್ಲಿ 24 ದಾಖಲಾಗಿವೆ ಎಂದು ಸಂಚಾರಿ ಪೊಲೀಸರು ಹೇಳಿದ್ದಾರೆ.
ಕಳೆದ 10 ತಿಂಗಳಲ್ಲಿ 20 ಸಾವಿರಕ್ಕಿಂತ ಹೆಚ್ಚು ಶಾಲಾ ವಾಹನಗಳನ್ನು ಪರಿಶೀಲನೆ ನಡೆಸಲಾಗಿದೆ. ಅಲ್ಲದೇ, ನಿಯಮ ಮೀರಿ ಬಸ್ ನಲ್ಲಿ ಹೆಚ್ಚುವರಿ ಶಾಲಾ ಮಕ್ಕಳನ್ನು ಸಾಗಾಟ ಮಾಡಿರುವುದೂ ಬೆಳಕಿಗೆ ಬಂದಿದೆ. ಅಲ್ಲದೇ, ಹೆಚ್ಚು ಟ್ರಾಫಿಕ್ಸ್ ರೂಲ್ಸ್ ಗಳನ್ನು ಶಾಲಾ ವಾಹನಗಳೇ ಬ್ರೇಕ್ ಮಾಡಿರುವುದು ಕಂಡು ಬಂದಿದೆ. ಹೀಗಾಗಿ ಶಾಲಾ ಮಂಡಳಿಗಳಿಗೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ. ಪಾಲಕರು ಇವುಗಳನ್ನು ಗಮನಿಸಿ, ಮಕ್ಕಳನ್ನು ಬಸ್ ಗೆ ಹತ್ತಿಸಬೇಕೆಂದು ಹಾಗೂ ಜಾಗೃತರಾಗಿರಬೇಕೆಂದು ಪೊಲೀಸರು ಹೇಳಿದ್ದಾರೆ.