ಕಾರವಾರ : ಕುಡಿದ ಮತ್ತಲ್ಲಿ ಕಂಟೇನರ್ ಚಾಲಕನೋರರ್ವ ಕಾರಿಗೆ ಗುದ್ದಿದ ಪರಿಣಾಮ ಕಾರಿನ ಮೇಲೆ ಕಂಟೇನರ್ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾ ಗ್ರಾಮದಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿ ಕಂಟೇನರ್ ಚಾಲಕ ಎಲ್ಲರ ಜೊತೆ ರಸ್ತೆ ಮಧ್ಯೆ ವಾಹನ ಅಡ್ಡಗಟ್ಟಿ ಗಲಾಟೆ ಮಾಡಿದ್ದು, ನಂತರ ಸಿಟ್ಟಿನಿಂದ ಕಂಟೇನರ್ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಈ ವೇಳೆ ಮಹಾರಾಷ್ಟ್ರ ಪಾಸಿಂಗ್ ಕಾರಿನ ಮೇಲೆ ಕಂಟೇನರ್ ಬಿದ್ದು, ಕಾರಿನಲ್ಲಿದ್ದ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಕೆಲವರಿಗೆ ಗಾಯಗಳಾಗಿದ್ದು, ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಕಂಟೇನರ್ ಚಾಲಕನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ : ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!



















