ದಾವಣಗೆರೆ: ವೈದ್ಯನೊಬ್ಬ ಸಿಸೇರಿಯನ್ ವೇಳೆ ಮಗುವಿನ ಮರ್ಮಾಂಗವನ್ನೇ ವೈದ್ಯ ಕತ್ತರಿಸಿರುವ ಘಟನೆ ನಡೆದಿದೆ.
ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಭಾರೀ ಎಡವಟ್ಟು ಮಾಡಿದ್ದಾನೆ. ವೈದ್ಯನನ್ನು ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ಸದ್ಯ ಈತನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ದಾವಣಗೆರೆ ಕೊಂಡಜ್ಜಿ ರಸ್ತೆಯಲ್ಲಿರುವ ಅರ್ಜುನ್ ಎಂಬುವವರ ಪತ್ನಿ ಅಮೃತಾ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿತ್ತು. ಹೀಗಾಗಿ ಜೂನ್ 27 ರಂದು ಅಮೃತಾಗೆ ಸಿಸೇರಿಯನ್ ಮಾಡಿ ಮಗು ತೆಗೆಯಲಾಗಿತ್ತು. ಈ ಸಂದರ್ಭದಲ್ಲಿ ವೈದ್ಯ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗಕ್ಕೆ ಕತ್ತರಿ ಹಾಕಿದ್ದಾನೆ.
ಘಟನೆಯಿಂದ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಬಾಪೂಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಇಂದು ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ವೈದ್ಯನ ಯಡವಟ್ಟಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಗುವಿನ ಕುಟುಂಬಸ್ಥರು ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಮಗುವಿನ ಸಾವಿಗೆ ಕಾರಣನಾದ ವೈದ್ಯನನ್ನ ಕೂಡಲೇ ಅಮಾನತು ಮಾಡಿ, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.