ಹಾವೇರಿ : ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನೂತನ ತಾಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಭಾರೀ ರಾಜಕೀಯ ಹೈಡ್ರಾಮ ನಡೆದಿದೆ. ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಸಚಿವರ ಸಮ್ಮುಖದಲ್ಲೇ ಕಾರ್ಯಕರ್ತರು ಕೈಕೈ ಮೀಲಾಯಿಸಿಕೊಂಡು ಜಗಳಕ್ಕೆ ಇಳಿದ ಘಟನೆ ಆತಂಕಕ್ಕೆ ಕಾರಣವಾಯಿತು. ಈಓ ಮೂಲಕ ಉದ್ಘಾಟನೆ ಸಮಾರಂಭವೇ ಗೊಂದಲದ ಕೇಂದ್ರವಾಗಿ ಮಾರ್ಪಟ್ಟಿತು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿಯ ವೇಳೆ ಎರಡೂ ಪಕ್ಷಗಳ ಬೆಂಬಲಿಗರು ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇಲ್ಲದಿದ್ದರೆ ಘಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇತ್ತು.
ನೂತನ ತಾಲೂಕು ಸಾರ್ವಜನಿಕ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮ ರಾಜಕೀಯ ಕ್ರೆಡಿಟ್ ವಾರ್‌ಗೆ ತಿರುಗಿದ್ದು, ‘ನಾಮುಂದು–ತಾಮುಂದು’ ಹೋಗುವ ವೇಳೆ ಜಗಳ ಶುರುವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : 20,000 ಕೋಟಿ ಮೀರಿದ TDR ಹಗರಣ – 3 ವರ್ಷದ ಪ್ರಮುಖ ದಾಖಲೆಗಳು ನಾಪತ್ತೆ : CID ತನಿಖೆಗೆ ಎನ್.ಆರ್ ರಮೇಶ್ ಆಗ್ರಹ!


















