ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಚಾಮುಂಡಿ ಚಲೋಗೆ ಮುಂದಾಗಿದ್ದ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿಂದೂ ಜಾಗರಣಾ ವೇದಿಕೆ ಚಾಮುಂಡಿ ಚಲೋ ಪಾದಯಾತ್ರೆಗೆ ಕರೆ ನೀಡಿತ್ತು. ಇನ್ನೊಂದು ಕಡೆ ಬಾನು ಮುಷ್ತಾಕ್ ಆಯ್ಕೆಯನ್ನು ಸಮರ್ಥಿಸಿ ಪಾದಯಾತ್ರೆ ನಡೆಸಲು ದಲಿತ ಸಂಘಟನೆಗಳು ಕರೆ ನೀಡಿದ್ದವು. ಈ ಎರಡೂ ಪಾದಯಾತ್ರೆಗಳಿಗೆ ಪೊಲೀಸರು ಅನುಮತಿ ನೀಡಿರಲಿಲ್ಲ.
ಅನುಮತಿ ಇಲ್ಲದೇ ಇದ್ದರೂ ಹಿಂದೂ ಹಿಂದೂ ಜಾಗರಣಾ ವೇದಿಕೆಯ ಸದಸ್ಯರು ಪಾದಯಾತ್ರೆ ಮಾಡುವುದಾಗಿ ಪಟ್ಟು ಹಿಡಿದಿತ್ತು. ಹೀಗಾಗಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.
ಬೆಳಗ್ಗೆ ಪಾದಯಾತ್ರೆ ನಡೆಸಲು ಆಗಮಿಸಿದ ಹಿಂದೂ ಮತ್ತು ಬಿಜೆಪಿ ಮುಖಂಡರನ್ನು ಪೊಲೀಸರು ಕುರುಬರಹಳ್ಳಿ ಸರ್ಕಲ್ ಬಳಿ ತಡೆದಿದ್ದರಿಂದ ಪೊಲೀಸರ ಜೊತೆ ವಾಗ್ವಾದ ನಡೆಸಲಾಯಿತು. ಕೊನೆಗೆ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಸೇರಿದಂತೆ ಹಲವು ಮುಖಂಡರು ಹಾಗೂ ಬಿಜೆಪಿ ಮಹಿಳಾ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದರು.
ಬಾನು ಮುಷ್ತಾಕ್ ಆಯ್ಕೆ ಪರವಾಗಿ ಚಾಮುಂಡಿ ಬೆಟ್ಟಕ್ಕೆ ಹೋಗಲು ದಲಿತ ಮಹಾಸಭಾದ ರಾಜ್ಯಾಧ್ಯಕ್ಷನ ರಾಜೇಶ್ ಆಗಮಿಸಿದ್ದರು. ಪ್ರತಿಭಟನೆಗೆ ಬರುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಅವರು ಪ್ರತಾಪ್ ಸಿಂಹ ಅವರಿಗೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಚಾಮುಂಡಿ ಬೆಟ್ಟಕ್ಕೆ ಹೋಗುವ ಪ್ರತಿಯೊಂದು ರಸ್ತೆಯಲ್ಲೂ ನಾಕ ಬಂದಿ ಹಾಕಲಾಗಿದ್ದು, ಪ್ರತಿಭಟನಕಾರನ್ನು ಕರೆದುಕೊಂಡು ಹೋಗಲು ಹೆಚ್ಚಿನ ಪೊಲೀಸ್ ವಾಹನಗಳ ನಿಯೋಜನೆ ಮಾಡಲಾಗಿತ್ತು. ಸ್ಥಳಕ್ಕೆ ಡಿಸಿಪಿಗಳಾದ ಸುಂದರ್ ರಾಜ್, ಬಿಂದು ಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದಸರಾ ವಿವಾದ | ಚಾಮುಂಡಿ ಚಲೋಗೆ ಮುಂದಾಗಿದ್ದ ಬಿಜೆ̧ಪಿ, ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ !
ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಚಾಮುಂಡಿ ಚಲೋಗೆ ಮುಂದಾಗಿದ್ದ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿಂದೂ ಜಾಗರಣಾ ವೇದಿಕೆ ಚಾಮುಂಡಿ ಚಲೋ ಪಾದಯಾತ್ರೆಗೆ ಕರೆ ನೀಡಿತ್ತು. ಇನ್ನೊಂದು ಕಡೆ ಬಾನು ಮುಷ್ತಾಕ್ ಆಯ್ಕೆಯನ್ನು ಸಮರ್ಥಿಸಿ ಪಾದಯಾತ್ರೆ ನಡೆಸಲು ದಲಿತ ಸಂಘಟನೆಗಳು ಕರೆ ನೀಡಿದ್ದವು. ಈ ಎರಡೂ ಪಾದಯಾತ್ರೆಗಳಿಗೆ ಪೊಲೀಸರು ಅನುಮತಿ ನೀಡಿರಲಿಲ್ಲ.
ಅನುಮತಿ ಇಲ್ಲದೇ ಇದ್ದರೂ ಹಿಂದೂ ಹಿಂದೂ ಜಾಗರಣಾ ವೇದಿಕೆಯ ಸದಸ್ಯರು ಪಾದಯಾತ್ರೆ ಮಾಡುವುದಾಗಿ ಪಟ್ಟು ಹಿಡಿದಿತ್ತು. ಹೀಗಾಗಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.
ಬೆಳಗ್ಗೆ ಪಾದಯಾತ್ರೆ ನಡೆಸಲು ಆಗಮಿಸಿದ ಹಿಂದೂ ಮತ್ತು ಬಿಜೆಪಿ ಮುಖಂಡರನ್ನು ಪೊಲೀಸರು ಕುರುಬರಹಳ್ಳಿ ಸರ್ಕಲ್ ಬಳಿ ತಡೆದಿದ್ದರಿಂದ ಪೊಲೀಸರ ಜೊತೆ ವಾಗ್ವಾದ ನಡೆಸಲಾಯಿತು. ಕೊನೆಗೆ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಸೇರಿದಂತೆ ಹಲವು ಮುಖಂಡರು ಹಾಗೂ ಬಿಜೆಪಿ ಮಹಿಳಾ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದರು.
ಬಾನು ಮುಷ್ತಾಕ್ ಆಯ್ಕೆ ಪರವಾಗಿ ಚಾಮುಂಡಿ ಬೆಟ್ಟಕ್ಕೆ ಹೋಗಲು ದಲಿತ ಮಹಾಸಭಾದ ರಾಜ್ಯಾಧ್ಯಕ್ಷನ ರಾಜೇಶ್ ಆಗಮಿಸಿದ್ದರು. ಪ್ರತಿಭಟನೆಗೆ ಬರುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಅವರು ಪ್ರತಾಪ್ ಸಿಂಹ ಅವರಿಗೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಚಾಮುಂಡಿ ಬೆಟ್ಟಕ್ಕೆ ಹೋಗುವ ಪ್ರತಿಯೊಂದು ರಸ್ತೆಯಲ್ಲೂ ನಾಕ ಬಂದಿ ಹಾಕಲಾಗಿದ್ದು, ಪ್ರತಿಭಟನಕಾರನ್ನು ಕರೆದುಕೊಂಡು ಹೋಗಲು ಹೆಚ್ಚಿನ ಪೊಲೀಸ್ ವಾಹನಗಳ ನಿಯೋಜನೆ ಮಾಡಲಾಗಿತ್ತು. ಸ್ಥಳಕ್ಕೆ ಡಿಸಿಪಿಗಳಾದ ಸುಂದರ್ ರಾಜ್, ಬಿಂದು ಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.