ಬೆಂಗಳೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು(ಸೋಮವಾರ) ವಜಾಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ನ್ಯಾಯಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ. ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದೆ.



















