ಮೈಸೂರು: ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಸೆ.9ರಂದು ʻಚಾಮುಂಡಿ ಬೆಟ್ಟ ಚಲೋʼ ಯಾತ್ರೆಯನ್ನು ಹಮ್ಮಿಕೊಂಡಿದೆ.
ನಗರದ ಕುರುಬಾರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟಕ್ಕೆ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ʻನಮ್ಮ ನಡಿಗೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆʼ ಹೆಸರಿನಲ್ಲಿ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ಇತ್ತೀಚೆಗಷ್ಟೇ ವಿಪಕ್ಷ ನಾಯಕ ಆರ್. ಅಶೋಕ್, ʻಚಾಮುಂಡೇಶ್ವರಿ ದೇವಾಲಯದ ಪಾವಿತ್ರ‍್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ” ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.
ಆದರೆ ಬಿಜೆಪಿ ಯಾತ್ರೆಗೂ ಮುನ್ನವೇ ಹಿಂದೂ ಜಾಗರಣ ವೇದಿಕೆ ಈಗ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿದೆ.