ಬೆಂಗಳೂರು : ಜಾತಿ ಗಣತಿ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ಈ ಮೂಲಕ ಇಂದು ಮುಕ್ತಾಯವಾಗಬೇಕಿದ್ದ ರಜೆ ಅಕ್ಟೋಬರ್ 18ವರೆಗೂ ವಿಸ್ತರಣೆಯಾಗಿದೆ.
ನಿರೀಕ್ಷೆಯಂತೆ ಸಮೀಕ್ಷೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಿಸಲಾಗಿದ್ದು, ಶಿಕ್ಷಕರನ್ನು ಸಮೀಕ್ಷೆಗೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಇದರಿಂದ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಈಗಾಲೇ ದಸರಾ ರಜೆಯಲ್ಲಿ ವಿದ್ಯಾರ್ಥಿಗಳಿಗೆ ಇದೀಗ ಜಾತಿಗಣತಿಯ ರಜೆ ಸಿಕ್ಕಂತಾಗಿದೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಇಂದು ಕೊನೆ ದಿನವಾಗಿದ್ದರಿಂದ ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದು, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ಸಮೀಕ್ಷೆ ಪೂರ್ಣಗೊಳಿಸಲು ತೀರ್ಮಾನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ.


















