ಬೆಂಗಳೂರು: ರಾಜ್ಯ ಸರ್ಕಾರ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಲ್ಲಿ ಖಾಲಿ (DYES Karnataka Recruitment 2025) ಇರುವ 6 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆರು ಮಾರ್ಗದರ್ಶಕ (ಮೆಂಟರ್) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ
ಖಾಲಿ ಇರುವ ಹುದ್ದೆಗಳು: 6
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 12
ಉದ್ಯೋಗ ಸ್ಥಳ: ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು, ಕೊಡಗು
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲಿಸಿ, ಮೆರಿಟ್ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ, ಸಂದರ್ಶನದಲ್ಲಿ ತೋರಿದ ಪ್ರದರ್ಶನದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಇಲಾಖೆ ಹೊರಡಿಸಿರುವ ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.
“ಅರ್ಜಿ ಸಲ್ಲಿಸುವುದು ಹೇಗೆ”?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://dyes.karnataka.gov.in/en ಗೆ ಭೇಟಿ ನೀಡಬೇಕು
DYES Karnataka ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಮೆಂಟರ್ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಸಲ್ಲಿಸಿದ ಅರ್ಜಿಯನ್ನು ಡೌನ್ ಲೋಡ್ ಮಾಡಬೇಕು.
ಡೌನ್ ಲೋಡ್ ಮಾಡಲಾದ ಅರ್ಜಿಯನ್ನು ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
“ಅರ್ಜಿ ಸಲ್ಲಿಸಬೇಕಾದ ವಿಳಾಸ”
Director General, Karnataka Sports Authority, State Youth Centre, Nrupathunga Road, Bengaluru-560001, Karnataka