ಬೆಂಗಳೂರು: ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ರಾಜ್ಯ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (DYES Karnataka Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೂರು ಯಂಗ್ ಪ್ರೊಫೇಷನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ
ಖಾಲಿ ಇರುವ ಹುದ್ದೆಗಳು: 3
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 16
ಉದ್ಯೋಗ ಸ್ಥಳ: ಬೆಂಗಳೂರು
ತಲಾ ಒಂದು ಸ್ಟ್ರೆಂತ್ ಆ್ಯಂಡ್ ಕಂಡಿಷನಿಂಗ್ ಲೀಡ್, ಯಂಗ್ ಪ್ರೊಫೇಷನಲ್ ಹಾಗೂ ಸ್ಪೋರ್ಟ್ಸ್ ಮೆಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಡಿಗ್ರಿ ಹಾಗೂ ಮಾಸ್ಟರ್ ಡಿಗ್ರಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.5 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ dyes.karnataka.gov.in ಗೆ ಭೇಟಿ ನೀಡಬೇಕು
DYES Karnataka ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಸಲ್ಲಿಸಿದ ಅರ್ಜಿಯನ್ನು ಡೌನ್ ಲೋಡ್ ಮಾಡಬೇಕು.
ಡೌನ್ ಲೋಡ್ ಮಾಡಲಾದ ಅರ್ಜಿಯನ್ನು ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Office of The Commissioner, Department of Youth Empowerment and Sports, State Youth Center, Nrupathunga Road, Bengaluru-560001, Karnataka
ಇದನ್ನೂ ಓದಿ:ಕಿಯಾ ಸೆಲ್ಟೋಸ್ ಡೀಸೆಲ್‌ಗೆ ಹೊಸ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಕೊಟ್ಟಿರುವುದು ಯಾಕೆ?



















