ಚಾಮರಾಜನಗರ: ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಗಸ್ತು ಅತ್ಯಂತ ಮುಖ್ಯವಾಗಿದ್ದು, ಇದನ್ನು ಬಲಪಡಿಸುವ ಅಗತ್ಯವಿದೆ. ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಈಗಾಗಲೇ ಅಳವಡಿಸಲಾಗಿರುವ ಎಂ.ಸ್ಟ್ರೈಪ್ ಜೊತೆಗೆ ನಮ್ಮ ಇ-ಗಸ್ತು ತಂತ್ರಾಂಶವನ್ನೂ ಜಾರಿ ಮಾಡಿ ನಿಗಾ ಇಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ
ಚಾಮರಾಜನಗರ, ಮೈಸೂರು ಭಾಗದಲ್ಲಿ ವನ್ಯಜೀವಿ ಮಾನವ ಸಂಘರ್ಷ ಹೆಚ್ಚಳದ ಬಗ್ಗೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖಂಡ್ರೆ, ವನ್ಯಜೀವಿ ಮತ್ತು ಮಾನವ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಈ ಹಿಂದೆಯೆ ಕೇಂದ್ರ ಸರ್ಕಾರದ ತಂತ್ರಾಂಶಕ್ಕಿಂತ ಉತ್ತಮವಾದ 8 ಅಂಶದ ಇ ಗಸ್ತು ತಂತ್ರಾಂಶ ಅಭಿವೃದ್ಧಿ ಮಾಡಿದೆ. ಬಂಡೀಪುರದಲ್ಲಿ 100 ಕಿಮೀ ವ್ಯಾಪ್ತಿಯಲ್ಲಿ ವನ್ಯಜೀವಿ ಸಂಘರ್ಷ ಹೆಚ್ಚಿದ್ದು, ಇದಕ್ಕಾಗಿ 25 ಕ್ಯಾಂಪ್ ಸ್ಥಾಪಿಸಲಾಗಿದೆ. ಒಂದೊಂದು ಕ್ಯಾಂಪ್ನಲ್ಲಿ 4 ಮಂದಿ ಕೆಲಸ ಮಾಡುತ್ತಿದ್ದಾರೆ. ಸಿಬ್ಬಂದಿಯ ಸಂಖ್ಯೆ ಹೆಚ್ಚಸಿ, ದಿನದ 24 ಗಂಟೆಯೂ ಗಸ್ತು ಮಾಡಲೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಸೂಚನೆ ಅರಣ್ಯ ಸಿಬ್ಬಂದಿ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮಾಡಲಾಗಿದ್ದು, ಸಿಬ್ಬಂದಿಗೆ ಸಮವಸ್ತ್ರ, ಸಂಬಳ ಸೇರಿದಂತೆ ಅಗತ್ಯ ಸೌಲಭ್ಯ ಮಾಡಿಕೊಡುತ್ತೀವಿ. ಎಐ ಆಧಾರಿತ ಕ್ಯಾಮೆರಾ ವ್ಯವಸ್ಥೆ ಮಾಡಿದ್ದೇವೆ. ಇದರಿಂದ ಚಿರತೆ, ಹುಲಿ, ಆನೆ ಸೇರಿ ಯಾವುದೇ ವನ್ಯಪ್ರಾಣಿ ಕಾಡಿನಿಂದ ಹೊರಬಂದರು ತಕ್ಷಣವೇ ಮಾಹಿತಿ ಸಿಗುತ್ತದೆ. ಇದಕ್ಕಾಗಿ ಕಮಾಂಡ್ ಕಂಟ್ರೋಲ್ ಸೆಂಟರ್ ಮಾಡಿದ್ದೀವಿ ಎಂದು ತಿಳಿಸಿದ್ದಾರೆ.
ಅಲ್ಲದೇ. ಶಾಲಾ ಕಾಲೇಜುಗಳಲ್ಲಿ ಕೂಡ ವಿಧ್ಯಾರ್ಥಿಗಳಿಗೆ ವನ್ಯ ಜೀವಿ ಹಾಗೂ ಇ-ಗಸ್ತುವಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲು ತಿಳಿಸಲಾಗಿದೆ. ಇನ್ನು, ಹಿರಿಯ ಅಧಿಕಾರಿಗಳು ಕಾಡಂಚಿನ ಗ್ರಾಮದಲ್ಲಿ ವಾಸ್ತವ್ಯ ಹೂಡುವ ಮೂಲಕ ಜನರ ವಿಶ್ವಾಸ ಗಳಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತ | ನಿರ್ದೇಶಕ ಸಂಗೀತ್ ಸಾಗರ್ ನಿಧನ



















