ಮಡಿಕೇರಿ: ಕೊಡಗಿನ (Kodagu) ಕೆಲವು ಪ್ರದೇಶಗಳಲ್ಲಿ ಭೂ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ತಾಲೂಕಿನ ಎರಡನೇ ಮೊಣ್ಣಗೇರಿ, ಮದೆನಾಡು ಗ್ರಾಮ, ಬೆಟ್ಟತ್ತೂರಿನ ಸುತ್ತಮುತ್ತಲಿನಲ್ಲಿ ಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಭೂ ಕಂಪನದ ತೀವ್ರತೆಯು ರಿಕ್ಟರ್ ಮಾಪನದಲ್ಲಿ ದಾಖಲಾಗಿಲ್ಲ. ಭೂಮಿ ಕಂಪಿಸಿದ ಸಂದೇಶವು ವಾಟ್ಸಪ್ ಗ್ರೂಪ್‌ಗಳಲ್ಲಿ ಹರಿದಾಡಿದೆ. ಸುಮಾರು 11 ಗಂಟೆ ವೇಳೆಯಲ್ಲಿ ಗುಡುಗಿನ ರೀತಿಯಲ್ಲಿ ಶಬ್ದ ಅಗಿದೆ ಎಂದು ಸ್ಥಳೀಯ ಗ್ರಾಪಂ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.