ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು, ಅದರಲ್ಲೂ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಪೂರ್ವ ಕರಾವಳಿ ರೈಲ್ವೆ ವಲಯದಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 4 ಜೂನಿಯರ್ ಎಂಜಿನಿಯರ್ (East Coast Railway Recruitment 2026) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪೂರ್ವ ಕರಾವಳಿ ರೈಲ್ವೆ
ಒಟ್ಟು ಹುದ್ದೆಗಳು: 4
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 10
ಉದ್ಯೋಗ ಸ್ಥಳ: ಖೋರ್ದಾ, ಒಡಿಶಾ
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ, ಡಿಪ್ಲೋಮಾ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 47 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ rrcbbs.org.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
East Coast Railway (ECoR)Rail Sadan, Samant Vihar, ChandrasekharpurBhubaneswar, Odisha – 751017



















