ಬೆಂಗಳೂರು : ನೀವು ಉತ್ತರ ಕನ್ನಡ ಜಿಲ್ಲೆಯವರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಹೌದು, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಕ್ಸ್ ಸರ್ವಿಸ್ ಮೆನ್ ಕಾಂಟ್ರಿಬ್ಯೂಟರಿ ಹೆಲ್ತ್ ಸ್ಕೀಮ್ (ECHS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕಾರವಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಕ್ಷಿಪ್ತ ವಿವರ
ಹುದ್ದೆಯ ಹೆಸರು: ಎಕ್ಸ್ ಸರ್ವಿಸ್ ಮೆನ್ ಕಾಂಟ್ರಿಬ್ಯೂಟರಿ ಹೆಲ್ತ್ ಸ್ಕೀಮ್ (ECHS)
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಕಾರವಾರ, ಉತ್ತರ ಕನ್ನಡ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 10
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
1 ಮೆಡಿಕಲ್ ಆಫೀಸರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಬಿಎಸ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 95 ಸಾವಿರ ರೂಪಾಯಿವರೆಗೆ ಸಂಬಳ ನಿಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ echs.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Stn HQ ECHS Cell INS Kadamba Naval Base Karwar PO-Arga Karwar- 581308.
ಇದನ್ನೂ ಓದಿ : UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ


















