ಬೆಂಗಳೂರು: ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕು, ಕೈ ತುಂಬ ಸಂಬಳ ಬರುವ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರಿ ಒಡೆತನದ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL)ನಲ್ಲಿ ಖಾಲಿ ಇರುವ 90 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎಂಜಿನಿಯರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
ನೇಮಕಾತಿ ಮಾಹಿತಿ
ನೇಮಕಾತಿ ಸಂಸ್ಥೆ : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆಳು: 90
ಹುದ್ದೆಗಳ ಹೆಸರು : ಎಂಜಿನಿಯರ್, ಟೆಕ್ನಿಕಲ್ ಆಫೀಸರ್
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ನೇಮಕಾತಿ ವಿಧಾನ: ಸಂದರ್ಶನ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದೇಶದ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು. ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ ಮೂರು ವರ್ಷ, ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಯಸ್ಸಿನ ಸಡಿಲಿಕೆ ಇದೆ.
ಪ್ರಾಜೆಕ್ಟ್ ಎಂಜಿನಿಯರ್, ಟೆಕ್ನಿಕಲ್ ಆಫೀಸರ್, ಅಸಿಸ್ಟಂಟ್ ಪ್ರಾಜೆಕ್ಟ್ ಎಂಜಿನಿಯರ್, ಸೀನಿಯರ್ ಆರ್ಟಿಸನ್, ಜೂನಿಯರ್ ಆರ್ಟಿಸನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 55 ಸಾವಿರ ರೂಪಾಯಿವರೆಗೆ ವೇತನ ನೀಡಲಾಗುತ್ತದೆ.
ಸಂದರ್ಶನದ ವಿವರ
ಕರ್ನಾಟಕದ ಬೆಂಗಳೂರು ಸೇರಿ ದೇಶದ ಹಲವೆಡೆ ಸಂದರ್ಶನ ನಡೆಯುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ecil.co.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಬೆಂಗಳೂರಿನಲ್ಲಿ ಸಂದರ್ಶನ ನಡೆಯುವ ಸ್ಥಳ: ECIL Zonal Office, # 1/1, 2nd floor, LIC Building, Sampige Road, Malleswaram, Bengaluru – 560 003.



















