ಬೆಂಗಳೂರು: ಶಾಸಕ ವಿನಯ್ ಕುಲಕರ್ಣಿ ಮನೆಯ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು, ಇನ್ನೂ ಪರಿಶೀಲನೆ ನಡೆಸುತ್ತಿದ್ದಾರೆ.
ನಾಲ್ಕು ಇನ್ನೋವಾ ಕಾರಿನಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಖಲೆಗಳನ್ನು ತಡಕಾಡುತ್ತಿದ್ದಾರೆ. ಸುಮಾರು 14 ಜನ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಇರುವ ವಿನಯ್ ಕುಲಕರ್ಣಿ ನಿವಾಸದ ಮೇಲೆಯೇ ದಾಳಿ ನಡೆದಿದೆ. ವಿನಯ್ ಕುಲಕರ್ಣಿಯ ಶಿವನಂದಿ ನಿವಾಸದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ 8 ಗಂಟೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.