ಬೆಂಗಳೂರು: ಮುಡಾ (MUDA Case) ವಿಚಾರಕ್ಕೆ ಸಂಬಂಧಿಸಿದಂತೆ ಇಡಿ ಹೊರಡಿಸಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು(press meet) ಅನಗತ್ಯವಾಗಿ ಇಡಿ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.
ರಾಜ್ಯದ ತೆರಿಗೆ ಹಣದಲ್ಲಿ ಸಮಾರಂಭ ನಡೆಸುತ್ತಿಲ್ಲ. ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಆಗಿ ಹೇಳಿದ್ದಾರೆ.