ಬೆಂಗಳೂರು : ಬಿಬಿಎಂಪಿ ಚೀಫ್ ಇಂಜಿನಿಯರ್ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ಕೇಂದ್ರ ಕಚೇರಿಯಲ್ಲಿರುವ ಮುಖ್ಯ ಅಭಿಯಂತರರ ಕಚೇರಿಯ ಮೇಲೆ ಇಂದು ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಳು ಜನ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಬಿಬಿಎಂ ಚೀಫ್ ಇಂಜಿನಿಯರ್ ಪ್ರಹ್ಲಾದ್ ವಿಚಾರಣೆ ನಡೆಸಿದ್ದಾರೆ.
2016 ರಲ್ಲಿ ನಡೆದಿರುವ ಬೋರ್ ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ವ್ಯಾಪ್ತಿಯಲ್ಲಿ ಬಿಬಿಎಂಪಿ ಕೊರೆಸಿದ್ದ ಬೋರ್ ವೆಲ್ ನಲ್ಲಿ 9 ಸಾವಿರ ಕೋಟಿ ರೂ. ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ಈ ವೇಳೆ ಫಿಲ್ಡ್ ನಲ್ಲಿ ವರ್ಕ್ ಮಾಡಿದ್ದ ಎಇ ಹಾಗೂ ಎಇಇ ಗಳ ವಿಚಾರಣೆ ನಡೆಸಲಾಗುತ್ತಿದೆ. ಅಂಬಿಕಾ ಪತಿ ಮನೆಯಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ.