ಬೆಂಗಳೂರು : ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಇಡಿ ದಾಳಿ ನಮಗೆ ಗೊತ್ತಿಲ್ಲದೆ ಇರೋ ವಿಚಾರವೇನಲ್ಲ. ಈ ಹಿಂದೆ ಕೂಡ ಜಾರಕಿಹೊಳಿಯವರ ನಿವಾಸಗಳ ಮೇಲೆ ಇಡಿ ದಾಳಿ ನಡೆದಿದೆ. ಸತೀಶ್ ಜಾರಕಿಹೊಳಿ ಅವರು ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಯಾವುದೇ ತನಿಖೆ ನಡೆಸಿದರೂ ಅವರು ಉತ್ತರ ನೀಡುತ್ತಾರೆ. ಯಾರು ಏನು ಗಾಬರಿ ಪಡಬೇಕಾಗಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ರಾಜಕೀಯ ಲಾಭಕ್ಕಾಗಿ ಕೇಂದ್ರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದ ಅವರು, ಇಡಿ ದಾಳಿಗಳು ಕೇವಲ ರಾಜಕೀಯ ಪ್ರೇರಿತ ಎಂದಿದ್ದಾರೆ.
ಇನ್ನೂ ಅನೇಕರ ಮೇಲೆ ED ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಿರುವ ಡಿ.ಕೆ. ಶಿವಕುಮಾರ್, ಎಲ್ಲಾ ಸಚಿವರಿಗೆ ಈಗಾಗಲೇ ಎಚ್ಚರಿಕೆ ಗಂಟೆ ನೀಡಿದ್ದೇನೆ ಎಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಇದನ್ನೂ ಓದಿ : ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ



















