ಬೆಂಗಳೂರು: ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಒಟ್ಟು ಐದು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಫಾರಿನ್ ಎಕ್ಸ್ಚೇನ್ ಮ್ಯಾನೇಜ್ಮೆಂಟ್ ಆ್ಯಕ್ಟ್ ಅಡಿ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ, ಬ್ಯುಸಿನೆಸ್ ಪಾರ್ಟ್ನರ್ ಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಶಾಸಕರಿಗೆ ಸಂಬಂಧಿಸಿದ ಐದು ಕಡೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಶಾಸಕ ಸುಬ್ಬಾರೆಡ್ಡಿ ಅವರು ಮಲೇಶಿಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ. ಅಲ್ಲದೇ, ವಿದೇಶಿ ಬ್ಯಾಂಕ್ ಗಳಲ್ಲಿ ಸುಬ್ಬಾರೆಡ್ಡಿ ಖಾತೆ ಹೊಂದಿದ್ದಾರೆ ಎನ್ನಲಾಗಿದೆ. ಅಕ್ರಮವಾಗಿ ವಾಹನಗಳ ಖರೀದಿ, ಹಣ ಹೂಡಿಕೆ ಸೇರಿದಂತೆ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.