ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದೆ.
1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ(ಇ.ಡಿ) ವಶ ಪಡಿಸಿಕೊಂಡಿದೆ.
ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಆಧಾರದ ಮೇಲೆ ಶಾಸಕ ಸತೀಶ್ ಸೈಲ್ ಹೊರಗಿದ್ದಾರೆ. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸತೀಶ್ ಸೈಲ್ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಎದುರಿಸುತ್ತಿದ್ದಾರೆ. ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಹೊತ್ತಲ್ಲೇ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರವಾರ ಗೋವಾ, ಮುಂಬೈ ಮತ್ತು ನವದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿದೆ.



















