ನವದೆಹಲಿ : ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್ ಹಾಗೂ ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದೆ.
ಈ ಇಬ್ಬರು ಕ್ರಿಕೆಟಿಗರಿಗೆ ಸೇರಿರುವ ಒಟ್ಟು 11.14 ಕೋಟಿ ರೂ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಂಡಿದೆ.
ಮುಟ್ಟುಗೋಲು ಹಾಕಿಕೊಂಡಿರುವ 11.14 ಕೋಟಿ ರೂ ಮೊತ್ತದಲ್ಲಿ ಸುರೇಶ್ ರೈನಾ ಅವರ ಹೆಸರಿನಲ್ಲಿರುವ 6.64 ಕೋಟಿ ರೂ. ಮೌಲ್ಯದ ಮ್ಯೂಚುವಲ್ ಫಂಡ್ ಹೂಡಿಕೆಗಳು ಮತ್ತು ಶಿಖರ್ ಧವನ್ ಅವರ ಹೆಸರಿನಲ್ಲಿರುವ 4.5 ಕೋಟಿ ರೂ ಮೌಲ್ಯದ ಸ್ಥಿರ ಆಸ್ತಿ ಸೇರಿವೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್



















