ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಗಂಭೀರ ಆರೋಪ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಇತರರು ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಯತ್ನಿಸಿದ್ದಾರೆಂಬ ಆರೋಪ ಮಾಡಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟೇಶ್ ಗೆ ಈ ವಿಚಾರದಲ್ಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅದರ ಅರ್ಥ ಕಾನೂನು ಪ್ರಕಾರ ಇಲ್ಲ ಎಂಬುವುದು ಅಲ್ಲವೇ? ಅಕ್ರಮ ಹಣ ವರ್ಗಾವಣೆಯಾಗಿದ್ದರೆ ನ್ಯಾಯಾಲಯ ಏಕೆ ತಡೆ ಕೊಡುತ್ತಿತ್ತು? ಇಡಿ ನನ್ನ ಹೆಸರು ಕೆಡಿಸಲು ಈ ಯತ್ನ ಮಾಡುತ್ತಿದೆ. ಇಡಿ ಜಪ್ತಿ ವರದಿ ಬಿಡುಗಡೆ ಮಾಡಿದೆಯೇ ಹೊರತು, ತನಿಖಾ ವರದಿ ಅಲ್ಲ.
ನನ್ನ ವಿಚಾರದಲ್ಲಿ ಆರೋಪ ಮಾಡಲು ಅವರಿಗೆ ಏನೂ ಸಿಕ್ಕಿಲ್ಲ. ಇದನ್ನೇ ಮುಂದಿಟ್ಟುಕೊಂಡು ನನ್ನ ಹೆಸರು ಕೆಡಿಸಲು ಯತ್ನಿಸುತ್ತಿದೆ. ಇದರ ಹಿಂದೆ ಬಿಜೆಪಿ ಇದೆ. ಆದರೆ, ಬಿಜೆಪಿ ಇದರಲ್ಲಿ ಯಶಸ್ವಿಯಾಗುವುದಿಲ್ಲ. ನಾನು ಏನು ಎಬುವುದು ಇಡೀ ರಾಜ್ಯಕ್ಕೆ ಗೊತ್ತು ಎಂದು ಹೇಳಿದ್ದಾರೆ.