ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL Associate Engineer Recruitment 2025) ಕಂಪನಿಯಲ್ಲಿ 48 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸೋಸಿಯೇಟ್ ಎಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 24 ರಂದು ಅಥವಾ ಅದಕ್ಕೂ ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು : ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL)
ಖಾಲಿ ಹುದ್ದೆಗಳ ಸಂಖ್ಯೆ: 48
ಹುದ್ದೆಯ ಸ್ಥಳ: ದೇಶಾದ್ಯಂತ
ಹುದ್ದೆಯ ಹೆಸರು: ಅಸೋಸಿಯೇಟ್ ಎಂಜಿನಿಯರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆ.24
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಎಸ್ಸಿ, ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 41 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಸಲ್ಲಿಸುವ ಯಾವುದೇ ಸಮುದಾಯದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು https://engineersindia.com/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 72 ಸಾವಿರ ರೂಪಾಯಿಯಿಂದ 96 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.



















