ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL Recruitment 2026) ಕಂಪನಿಯಲ್ಲಿ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10 ಡೆಪ್ಯೂಟಿ ಮ್ಯಾನೆಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು: ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL)
ಖಾಲಿ ಹುದ್ದೆಗಳ ಸಂಖ್ಯೆ: 10
ಹುದ್ದೆಯ ಸ್ಥಳ: ದೇಶಾದ್ಯಂತ
ಹುದ್ದೆಯ ಹೆಸರು: ಡೆಪ್ಯೂಟಿ ಮ್ಯಾನೆಜರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 12
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಬಿಎಸ್ಸಿ, ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 32 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಜಿಗಳನ್ನು ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ನೇಮಕಾತಿ ಹೊಂದಿದವರಿಗೆ ಮಾಸಿಕ 2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು https://engineersindia.com/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.



















