ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL Recruitment 2026) ಕಂಪನಿಯಲ್ಲಿ 20 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 20 ಅಸೋಸಿಯೇಟ್ ಎಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು: ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL)
ಖಾಲಿ ಹುದ್ದೆಗಳ ಸಂಖ್ಯೆ: 20
ಹುದ್ದೆಯ ಸ್ಥಳ: ದೇಶಾದ್ಯಂತ
ಹುದ್ದೆಯ ಹೆಸರು: ಅಸೋಸಿಯೇಟ್ ಎಂಜಿನಿಯರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 12
ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಿವಿಲ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಬಿ.ಇ, ಬಿ.ಟೆಕ್, ಬಿಎಸ್ಸಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 32 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಸಲ್ಲಿಸುವ ಯಾವುದೇ ಸಮುದಾಯದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ engineersindia.com ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು.
ಇದನ್ನೂ ಓದಿ :ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!



















