ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL Recruitment 2026) ಕಂಪನಿಯಲ್ಲಿ 41 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸೋಸಿಯೇಟ್ ಎಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು: ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL)
ಖಾಲಿ ಹುದ್ದೆಗಳ ಸಂಖ್ಯೆ: 41
ಹುದ್ದೆಯ ಸ್ಥಳ: ದೇಶಾದ್ಯಂತ
ಹುದ್ದೆಯ ಹೆಸರು: ಅಸೋಸಿಯೇಟ್ ಎಂಜಿನಿಯರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 30
20 ಅಸೋಸಿಯೇಟ್ ಎಂಜಿನಿಯರ್ ಗ್ರೇಡ್ II, 20 ಅಸೋಸಿಯೇಟ್ ಎಂಜಿನಿಯರ್ ಗ್ರೇಡ್ III ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಎಸ್ಸಿ, ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 41 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು https://engineersindia.com/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 96 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಇದನ್ನೂ ಓದಿ : ಕ್ಯಾಮೆರಾ ಕಣ್ಣಿಗೆ ಸೆರೆಯಾದ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್ : ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ!



















