ಬೆಂಗಳೂರು ಗ್ರಾಮಾಂತರ : ರಸ್ತೆ ದಾಟುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ನಡೆದಿದೆ.
ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ವೃದ್ಧ ವ್ಯಕ್ತಿಯ ಕಾಲು ಮುರಿದಿದೆ. ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಸ್ಥಳದಲ್ಲೆ ಇದ್ದವರು ವೃದ್ಧನನ್ನು ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದ ವೃದ್ಧ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಯಲ್ಲಿ ಸದ್ಯ ಪ್ರಕರಣ ದಾಖಲಾಗಿದ್ದು, ಮೃತ ವೃದ್ಧನ ಮಾಹಿತಿ ಕಲೆ ಹಾಕುತ್ತಿದ್ದಾರೆಂದು ತಿಳಿದು ಬಂದಿದೆ.


















