ಬೆಂಗಳೂರು : ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗಿದ್ದ ವೃದ್ಧರೊಬ್ಬರು ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದಾರಣ ಘಟನೆ ನಡೆದಿದೆ.
ನಿನ್ನೆ ಬೆಳಿಗ್ಗೆ ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, ವೃದ್ಧ ತಮ್ಮ ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ತೆರಳಿದ್ದ ವೇಳೆ ಟ್ಯಾಂಕರ್ ಡಿಕ್ಕಿ ಹೊಡೆದು ಅವರ ಮೇಲೆಯೇ ಹರಿದಿದೆ. ಅಪಘಾತದ ತೀವ್ರತೆಗೆ ವೃದ್ಧ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆ ವೇಳೆ ಇಬ್ಬರು ಮಕ್ಕಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನಾ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು!


















