ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಚುನಾವಣೆಯ ಉಡುಗೊರೆ ‘ಬೆಲೆ ಏರಿಕೆ’ : ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ KRS ಪಕ್ಷ ಆಕ್ರೋಶ!

May 7, 2026
Share on WhatsappShare on FacebookShare on Twitter

ಬೆಂಗಳೂರು : ಪಂಚ ರಾಜ್ಯಗಳ ಚುನಾವಣೆಯ ಅಬ್ಬರ ಮುಗಿದು ತಕ್ಷಣವೇ, ಜನಸಾಮಾನ್ಯರಿಗೆ ಆಡಳಿತಾರೂಢ ಸರ್ಕಾರಗಳು ‘ಬೆಲೆ ಏರಿಕೆ’ಯ ಶಾಕ್ ನೀಡಿರುವುದು ಖಂಡನೀಯ. ಈ ಜನವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರಾದ ರಘು ಜಾಣಗೆರೆ ಅವರು, ದೇಶದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವ ಹಾಗೂ ದಿಢೀರ್ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮ, ಸಣ್ಣ ಕೈಗಾರಿಕೆಗಳು ಮತ್ತು ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕಿರುವುದನ್ನು ತೀವ್ರವಾಗಿ ಖಂಡಿಸಿದರು.

“ಯುದ್ಧ ಪರಿಸ್ಥಿತಿ ಮತ್ತು ಸರಬರಾಜು ಸಮಸ್ಯೆಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾದರೂ, ಯಾವುದೇ ಸಮಸ್ಯೆ ಇಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಸುಳ್ಳು ಭರವಸೆ ನೀಡುತ್ತಾ ಜನರನ್ನು ದಾರಿ ತಪ್ಪಿಸಿ, ಈಗ ಏಕಾಎಕಿ ವಾಣಿಜ್ಯ ಗ್ಯಾಸ್ ಸಿಲೆಂಡರ್’ಗಳ ಬೆಲೆ ಏರಿಸಿದ್ದಾರೆ” ಎಂದು ಆರೋಪಿಸಿದರು.

“ಸರ್ಕಾರ ನಿಗದಿಪಡಿಸಿದ ದರದಲ್ಲಿ ಎಲ್ಲಿಯೂ ವಾಣಿಜ್ಯ ಸಿಲಿಂಡರ್ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೋಟೆಲ್ ಮಾಲೀಕರು ಹಾಗೂ ಸಣ್ಣ ವ್ಯಾಪಾರಸ್ಥರು ಅನಿವಾರ್ಯವಾಗಿ ಕಾಳಸಂತೆಯಲ್ಲಿ ₹3,000 ರಿಂದ ₹5,000 ಹೆಚ್ಚುವರಿಯಾಗಿ ನೀಡಿ ಸಿಲಿಂಡರ್ ಖರೀದಿಸುವಂತಾಗಿದೆ. ಸರ್ಕಾರವೇ ವಾಣಿಜ್ಯ ಸಿಲಿಂಡರ್ ದರವನ್ನು ₹3,154ಕ್ಕೆ ಏರಿಸಿದ್ದು, ಕಾಳಸಂತೆಯಲ್ಲಿ ಅದು ₹6,000 ರಿಂದ ₹8,000ವರೆಗೆ ತಲುಪಿದೆ. ಇದರಿಂದ ಹೋಟೆಲ್ ಉದ್ಯಮ ನಡೆಸುವುದು ಅಸಾಧ್ಯವಾಗಿ, ಅನೇಕ ಸಣ್ಣ ಹೋಟೆಲ್‌ಗಳು ಬೀಗ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು. “ಹೋಟೆಲ್‌ಗಳು ಮುಚ್ಚುತ್ತಿರುವುದರಿಂದ ಸಾಮಾನ್ಯ ಜನರು ಕಡಿಮೆ ದರದಲ್ಲಿ ತಿಂಡಿ-ಊಟ ಪಡೆಯುವ ಅವಕಾಶ ಕಳೆದುಕೊಳ್ಳುತ್ತಿದ್ದಾರೆ. ಬಡವರು, ಕಾರ್ಮಿಕರು ಮತ್ತು ಪ್ರಯಾಣಿಕರು ಸಹ ದಿನನಿತ್ಯದ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದರು.

“ಸಿಲಿಂಡರ್ ಸಿಗದೇ ಅನೇಕ ಹೋಟೆಲ್‌ಗಳು ಸೌದೆ ಒಲೆಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಬಂದಿದೆ. ಆದರೆ ಹೊಗೆ ಮತ್ತು ಆರೋಗ್ಯ ಸಮಸ್ಯೆಗಳ ಕಾರಣಕ್ಕೆ ಕೆಲಸಗಾರರು ಕೆಲಸ ತೊರೆಯುತ್ತಿದ್ದಾರೆ. ಇದರಿಂದ ಹೋಟೆಲ್ ಉದ್ಯಮ ಮತ್ತಷ್ಟು ಕುಸಿಯುತ್ತಿದೆ, ಹಾಗೆಯೆ ಇದು ಪರಿಸರದ ಮೇಲೆಯೂ ಅಪಾರ ದುಷ್ಪರಿಣಾಮ ಬೀರುತ್ತಿದೆ. ಕಳೆದ ಮೂರು ವರ್ಷಗಳಿಂದ ರಷ್ಯಾದಿಂದ ಅತಿ ಕಡಿಮೆ ಬೆಲೆಗೆ ಕಚ್ಚಾತೈಲವನ್ನು ಅಮದು ಮಾಡಿಕೊಳ್ಳಲಾಗಿದೆ, ಆದರೂ ಕೂಡ ದೇಶದಲ್ಲಿ ಪೆಟ್ರೋಲಿಯಂ ಉತ್ಮನ್ನಗಳ ಬೆಲೆಯನ್ನು ಕಡಿಮೆ ಮಾಡದೆ, ತೈಲೋತ್ಪನ್ನ ಕಂಪನಿಗಳು ಹೇರಳವಾಗಿ ಲಾಭ ಮಾಡಿಕೊಂಡಿವೆ, ಆದರೆ, ಕೇವಲ ಎರಡು ತಿಂಗಳಲ್ಲಿನ ಅಂತರಾಷ್ಟ್ರೀಯ ಬೆಲೆ ಏರಿಕೆಯಿಂದ ನಷ್ಟವಾಗುತ್ತಿದೆ ಎಂದು ಬೆಲೆ ಏರಿಕೆ ಮಾಡಲಾಗುತ್ತಿದೆ. ಭಾರತವು ರಷ್ಯಾದಿಂದ ಎಷ್ಟು ಮತ್ತು ಯಾವ ದರದಲ್ಲಿ ಕಚ್ಚಾತೈಲ ಅಮದು ಮಾಡಿಕೊಂಡಿದೆ, ಅದರಿಂದ ಯಾವ ಯಾವ ಕಂಪನಿಗಳಿಗೆ ಎಷ್ಟು ಲಾಭವಾಗಿದೆ ಎಂಬ ಮಾಹಿತಿಯನ್ನು ಒಕ್ಕೂಟ ಸರ್ಕಾರವು ಬಚ್ಚಿಟ್ಟಿದೆ, ತಕ್ಷಣವೇ ಈ ಮಾಹಿತಿಯನ್ನು ಬಹಿರಂಗಗೊಳಿಸಬೇಕು. ಹಗಲು ದರೋಡೆ ಮಾಡಲೆಂದೆ ಇಂತಹ ಮಾಹಿತಿಗಳನ್ನು ರಾಷ್ಟ್ರೀಯ ಗೋಪ್ಯತೆಯ ವಿಚಾರವೆಂದು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್ ಅವರು ಮಾತನಾಡಿ, “ಒಕ್ಕೂಟ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರವನ್ನು ಗಗನಕ್ಕೇರಿಸುವ ಮೂಲಕ ಸಣ್ಣ ಉದ್ಯಮಗಳ ಬೆನ್ನೆಲುಬನ್ನು ಮುರಿಯುತ್ತಿದೆ ಎಂದು ಆರೋಪಿಸಿದರು. ಗ್ಯಾಸ್ ದರ ಏರಿಕೆಯಿಂದ ರಾಜ್ಯದಾದ್ಯಂತ ಸಣ್ಣ ಮತ್ತು ಮಧ್ಯಮ ಗಾತ್ರದ ಹೋಟೆಲ್‌ಗಳು ಮುಚ್ಚುವ ಭೀತಿಯಲ್ಲಿವೆ ಎಂದು ಹೇಳಿದರು. ಪ್ರವಾಸಿ ತಾಣಗಳಲ್ಲಿ ಅಡುಗೆ ಅನಿಲದ ಕೊರತೆ ಮತ್ತು ಬೆಲೆ ಏರಿಕೆಯಿಂದಾಗಿ ಹೋಟೆಲ್‌ಗಳು ಮುಚ್ಚುತ್ತಿರುವುದರಿಂದ ಪ್ರವಾಸಿಗರು ತಿಂಡಿ-ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಎಲ್‌ಪಿಜಿ ಅವಲಂಬಿತ ಆಟೋ ಮತ್ತು ಟ್ಯಾಕ್ಸಿ ಚಾಲಕರು ಅನಿಲದ ಕೊರತೆ ಹಾಗೂ ದುಬಾರಿ ದರದಿಂದ ಜೀವನೋಪಾಯ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ” ಎಂದು ಹೇಳಿದರು.

“ರಾಜ್ಯದ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ಮೋಸಗೊಳಿಸಿ, ಇದೀಗ ಹಿಂಬಾಗಿಲಿನಿಂದ ವಿದ್ಯುತ್ ದರ ಏರಿಸಿ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹಾಕುತ್ತಿದೆ, ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಿರುವುದು ಮಧ್ಯಮ ವರ್ಗದವರ ಮಾಸಿಕ ಬಜೆಟ್‌ಗೆ ಗಂಭೀರ ಹೊಡೆತ ನೀಡಿದೆ. ಈಗಾಗಲೇ ವಿದ್ಯುತ್ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ಸಣ್ಣ ಕೈಗಾರಿಕೆಗಳಿಗೆ ಈ ದರ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಉತ್ಪಾದನಾ ವೆಚ್ಚ ಹೆಚ್ಚಳದಿಂದ ಅಗತ್ಯ ವಸ್ತುಗಳ ಬೆಲೆ ಇನ್ನಷ್ಟು ಏರಿಕೆಯಾಗುತ್ತಿದೆ” ಎಂದು ಆರೋಪಿಸಿದರು.

ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ್ ಎಸ್. ಅವರು ಮಾತನಾಡಿ “ರಾಜ್ಯದಲ್ಲಿ ವಿದ್ಯುತ್ ದರ ಏರಿಸುವ ಮೂಲಕ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳು ಹಾಗು ಉದ್ಯಮಳ ಆಡಿಪಾಯವನ್ನೆ ಅಲುಗಾಡಿಸಲಾಗುತ್ತಿದೆ. ಪ್ರತಿವರ್ಷ ವಿದ್ಯುತ್ ದರ ಏರಿಕೆಯಿಂದ ವಿದ್ಯುತ್ ಬಹಳ ದುಬಾರಿಯಾಗಿದ್ದು, ಉಚಿತ ವಿದ್ಯುತ್ ನೀಡುತ್ತಿದ್ದೇವೆ, ಆದ್ದರಿಂದ ಈ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ವಿರೋಧಿಸುವುದಿಲ್ಲ ಎಂಬ ಭ್ರಮೆಯಲ್ಲಿರುವ ರಾಜ್ಯ ಸರ್ಕಾರವು, ಇದೇ ಸಾಮಾನ್ಯ ವರ್ಗದ ಜನರು ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಾಗಿದ್ದು, ಒಂದು ಕಡೆ ಕೊಟ್ಟು ಮತ್ತೊಂದು ಕಡೆಯಿಂದ ಕಿತ್ತುಕೊಳ್ಳುತ್ತಿರುವುದು ಜನರಿಗೆ ತಿಳಿಯುತ್ತಿಲ್ಲ ಎಂದು ಅದು ಭಾವಿಸಿದಂತಿದೆ. ರಾಜ್ಯದಲ್ಲಿನ ಎಸ್ಕಾಂಗಳು, ವಿದ್ಯುತ್ ಪ್ರಸರಣ ನಿಗಮ ಹಾಗೂ ವಿದ್ಯುತ್ ನಿಗಮಗಳಲ್ಲಿನ ಅಪಾರ ಭ್ರಷ್ಟಾಚಾರದಿಂದ ವಿದ್ಯುತ್ ದರ ಏರಿಸಬೇಕಾದ ಪರಿಸ್ಥಿತಿ ಬಂದಿದೆ. ಇವುಗಳು ರಾಜ್ಯದ ಜನರ ಪಾಲಿಗೆ ಬಿಳಿ ಆನೆಗಳಂತಾಗಿದ್ದು, ಇವುಗಳನ್ನು ಸಾಕಲು ಜನರು ವಿದ್ಯುತ್’ಗೆ ಹೆಚ್ಚಿನ ದರ ನೀಡಬೇಕಾದ ಪರಿಸ್ಥಿತಿ ಬಂದಿದೆ.

ಇಂದು ಇಡೀ ದೇಶದಲ್ಲೆ ಅತಿ ಹೆಚ್ಚು ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಅದು ಶೇಕಡ 75 ಮೀರಿದೆ. ಅತಿ ಕಡಿಮೆ ದರದಲ್ಲಿ ಜಲ, ವಾಯು ಹಾಗು ಸೋಲಾರ್ ಮೂಲಗಳಿಂದ ವಿದ್ಯುತ್ ಉತ್ಪಾಧಿಸಲಾಗುತ್ತಿದೆ. ಆದರೆ, ಖಾಸಗಿ ಬಂಡವಾಳಿಗರಿಗೆ ಅದರಲ್ಲೂ ಬೇನಾಮಿಯಾಗಿ ಸೋಲಾರ್ ಹಾಗು ಪವನ ವಿದ್ಯುತ್ ಕ್ಷೇತ್ರದಲ್ಲಿ ಹೂಡಿಕೆ ಮಾಡಿರುವ ರಾಜಕಾರಣಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಜನರಿಗೆ ಮಂಕುಬೂದಿ ಎರಚಿ ಬೆಲೆ ಏರಿಕೆಯನ್ನು ಪ್ರತಿ ವರ್ಷ ಸಂಪ್ರದಾಯದಂತೆ ಮಾಡಲಾಗುತ್ತಿದೆ ಮತ್ತು ಅದು ತೀರ ಅವಶ್ಯಕ ಎನ್ನುವಂತೆ ಬಿಂಬಿಸಲಾಗುತ್ತಿದೆ. ಆದರೆ ವಾಸ್ತವದಲ್ಲಿ, ಈಗಿರುವ ಅರ್ಧ ಬೆಲೆಯಲ್ಲಿ ವಿದ್ಯುತ್ ನೀಡಬಹುದಾಗಿದೆ. ರಾಜ್ಯ ಸರ್ಕಾರವು ಯಾವ ಯಾವ ಮೂಲಗಳಿಂದ ಮತ್ತು ಕಂಪನಿಗಳಿಂದ ವಿದ್ಯುತ್ ಖರೀದಿ ಮಾಡುತ್ತಿದೆ, ಯಾವ ದರದಲ್ಲಿ ಖರೀದಿ ಮಾಡುತ್ತಿದೆ, ಅವುಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳು ಏನು ಎನ್ನುವ ಮಾಹಿತಿಯನ್ನು ಬಹಿರಂಗಪಡಿಸಬೇಕು. ಈ ವಿಚಾರದಲ್ಲಿ ಜನರನ್ನು ಸಂಪೂರ್ಣವಾಗಿ ಕತ್ತಲೆಯಲ್ಲಿ ಇಟ್ಟು ಅವರನ್ನು ಮೂರ್ಖರನ್ನಾಗಿಸಿ, ಲೂಟಿ ಮಾಡಲಾಗುತ್ತಿದೆ. ಇಷ್ಟು ಪ್ರಮಾಣದಲ್ಲಿ ಹಣ ನೀಡಿದರೂ ಕೂಡ ಗುಣಮಟ್ಟದ ವಿದ್ಯುತ್ ಲಭ್ಯವಿಲ್ಲ, ಪದೇ ಪದೇ ವಿದ್ಯುತ್ ಕಡಿತ ಮಾಡಲಾಗುತ್ತಿದೆ, ಗ್ರಾಮೀಣ ಭಾಗದಲ್ಲಿ ಇದು ಬಹಳ ಹೆಚ್ಚಾಗಿದ್ದು, ರೈತರು ತಮ್ಮ ಬೆಳೆ ಉಳಿಸಿಕೊಳ್ಳಲು ಪರದಾಡುವಂತಾಗಿದೆ. ಚುನಾವಣೆ ಮುಗಿಯುವವರೆಗೆ ಬೆಲೆಗಳನ್ನು ಏರಿಸದೆ, ಮತದಾನ ಮುಗಿದ ತಕ್ಷಣವೇ ಬೆಲೆ ಏರಿಸುವುದು ರಾಜಕೀಯ ಪಕ್ಷಗಳ ಯೋಜಿತ ತಂತ್ರಗಾರಿಕೆಯಾಗಿದೆ ಇದು ನಿಲ್ಲಬೇಕು ಮತ್ತು ತಕ್ಷಣವೇ ಗ್ಯಾಸ್ ಹಾಗೂ ವಿದ್ಯುತ್ ಬೆಲೆ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಇನ್ನು, ‘ಅಚ್ಛೇ ದಿನ್’ ಭರವಸೆ ನೀಡಿದ್ದ ಬಿಜೆಪಿ ಸರ್ಕಾರ, ಯುದ್ಧದ ನೆಪವೊಡ್ಡಿ ಸಾಮಾನ್ಯ ಜನರ ಮೇಲೆ ಆರ್ಥಿಕ ಭಾರ ಹಾಕುತ್ತಿದೆ. ಮೂರು ವರ್ಷಗಳಾದರೂ ಕಾಂಗ್ರೆಸ್ ಸರ್ಕಾರ ಯುವಕರಿಗೆ ಸಮರ್ಪಕ ಉದ್ಯೋಗ ಒದಗಿಸುವಲ್ಲಿ ವಿಫಲವಾಗಿದೆ. ನಿರುದ್ಯೋಗ ಮತ್ತು ಜೀವನ ವೆಚ್ಚದ ಏರಿಕೆ – ಇವೆರಡರ ನಡುವೆ ಜನಸಾಮಾನ್ಯರು ಹೈರಾಣಾಗಿದ್ದಾರೆ. ತಕ್ಷಣವೇ ಬೆಲೆ ಏರಿಕೆ ಆದೇಶಗಳನ್ನು ಹಿಂಪಡೆಯಬೇಕೆಂದು ಕೆಆರ್‌ಎಸ್ ಪಕ್ಷ ಆಗ್ರಹಿಸಿದೆ.

ರಾಜ್ಯ ಕಾರ್ಯಾಧ್ಯಕ್ಷರಾದ ರಘು ಜಾಣಗೆರೆ, ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ ಎಸ್, ಸಂಘಟನಾ ಕಾರ್ಯದರ್ಶಿಗಳಾದ ಆರೋಗ್ಯ ಸ್ವಾಮಿ,ರಘು ನಂದನ, ಆನಂದ್, ಅಕ್ಷಯ್ ಬೆಂಗಳೂರು ಪಶ್ಚಿಮ ಜಿಲ್ಲಾಧ್ಯಕ್ಷರಾದ ದೇವರಾಜ ಆರ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಧನಂಜಯ ಎಮ್, ಪದಾಧಿಕಾರಿಗಳಾದ ರಾಮ ರೆಡ್ಡಿ,ಲೋಕೇಶ್, ಶ್ರೀನಿವಾಸನ್, ವೆಂಕಟೇಶ್, ಮೇರಿ, ಅಂಜಲಿ, ಸತೀಶ್, ಪುಷ್ಪ, ಆಶಾ, ಸದಾಮ್, ಮೊಹಮ್ಮದ್ ಆಶಾಮ್, ಜಯಪ್ಪ ರೆಡ್ಡಿ ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!

Tags: bengaloreKarnataka News beat
SendShareTweet
Previous Post

ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!

Next Post

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ – ಕೇಂದ್ರದ ನಡೆಗೆ ಕರವೇ ಪ್ರವೀಣ್‌ ಶೆಟ್ಟಿ ಆಕ್ರೋಶ!

Related Posts

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ – ಕೇಂದ್ರದ ನಡೆಗೆ ಕರವೇ ಪ್ರವೀಣ್‌ ಶೆಟ್ಟಿ ಆಕ್ರೋಶ!
ರಾಜ್ಯ

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ – ಕೇಂದ್ರದ ನಡೆಗೆ ಕರವೇ ಪ್ರವೀಣ್‌ ಶೆಟ್ಟಿ ಆಕ್ರೋಶ!

ಸುಡು ಬಿಸಿಲಿಗೆ ತತ್ತರಿಸಿದ್ದ ಉಡುಪಿ ಜನತೆಗೆ ತಂಪೆರೆದ ಮಳೆರಾಯ!
ಉಡುಪಿ

ಸುಡು ಬಿಸಿಲಿಗೆ ತತ್ತರಿಸಿದ್ದ ಉಡುಪಿ ಜನತೆಗೆ ತಂಪೆರೆದ ಮಳೆರಾಯ!

ಪ.ನಗರ ಪಾಲಿಕೆಯಲ್ಲಿ ಬೃಹತ್ ‘A’ ಖಾತಾ ಹಗರಣ ಆರೋಪ – ಜಂಟಿ ಆಯುಕ್ತೆ ಸೇರಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ!
ಬೆಂಗಳೂರು

ಪ.ನಗರ ಪಾಲಿಕೆಯಲ್ಲಿ ಬೃಹತ್ ‘A’ ಖಾತಾ ಹಗರಣ ಆರೋಪ – ಜಂಟಿ ಆಯುಕ್ತೆ ಸೇರಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ!

25 ವರ್ಷಗಳ ಕನಸು ಕೊನೆಗೂ ನನಸು – ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ!
ಉಡುಪಿ

25 ವರ್ಷಗಳ ಕನಸು ಕೊನೆಗೂ ನನಸು – ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ!

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!
ಬೆಂಗಳೂರು

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!
ಬೀದರ್

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!

Next Post
ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ – ಕೇಂದ್ರದ ನಡೆಗೆ ಕರವೇ ಪ್ರವೀಣ್‌ ಶೆಟ್ಟಿ ಆಕ್ರೋಶ!

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ - ಕೇಂದ್ರದ ನಡೆಗೆ ಕರವೇ ಪ್ರವೀಣ್‌ ಶೆಟ್ಟಿ ಆಕ್ರೋಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ – ಕೇಂದ್ರದ ನಡೆಗೆ ಕರವೇ ಪ್ರವೀಣ್‌ ಶೆಟ್ಟಿ ಆಕ್ರೋಶ!

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ – ಕೇಂದ್ರದ ನಡೆಗೆ ಕರವೇ ಪ್ರವೀಣ್‌ ಶೆಟ್ಟಿ ಆಕ್ರೋಶ!

ಚುನಾವಣೆಯ ಉಡುಗೊರೆ ‘ಬೆಲೆ ಏರಿಕೆ’ : ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ KRS ಪಕ್ಷ ಆಕ್ರೋಶ!

ಚುನಾವಣೆಯ ಉಡುಗೊರೆ ‘ಬೆಲೆ ಏರಿಕೆ’ : ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ KRS ಪಕ್ಷ ಆಕ್ರೋಶ!

ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!

ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!

ತಮಿಳುನಾಡಲ್ಲಿ ಮತ್ತೆ ‘ರೆಸಾರ್ಟ್ ರಾಜಕೀಯ’ : TVKಗೆ ಬೆಂಬಲ ನೀಡುವ ವಿಚಾರದಲ್ಲಿ AIADMKಯಲ್ಲಿ ಭಿನ್ನಮತ?

ತಮಿಳುನಾಡಲ್ಲಿ ಮತ್ತೆ ‘ರೆಸಾರ್ಟ್ ರಾಜಕೀಯ’ : TVKಗೆ ಬೆಂಬಲ ನೀಡುವ ವಿಚಾರದಲ್ಲಿ AIADMKಯಲ್ಲಿ ಭಿನ್ನಮತ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ – ಕೇಂದ್ರದ ನಡೆಗೆ ಕರವೇ ಪ್ರವೀಣ್‌ ಶೆಟ್ಟಿ ಆಕ್ರೋಶ!

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ – ಕೇಂದ್ರದ ನಡೆಗೆ ಕರವೇ ಪ್ರವೀಣ್‌ ಶೆಟ್ಟಿ ಆಕ್ರೋಶ!

ಚುನಾವಣೆಯ ಉಡುಗೊರೆ ‘ಬೆಲೆ ಏರಿಕೆ’ : ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ KRS ಪಕ್ಷ ಆಕ್ರೋಶ!

ಚುನಾವಣೆಯ ಉಡುಗೊರೆ ‘ಬೆಲೆ ಏರಿಕೆ’ : ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ KRS ಪಕ್ಷ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat