ಹಾಸನ: ಅತಿಯಾದ ವೇಗದ ಚಾಲನೆಯಿಂದಾಗಿ ಕಾರು ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಅತಿಯಾದ ವೇಗದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಪಕ್ಕಕ್ಕೆ ಸರಿದಿದೆ. ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹಾಸನದ ಎನ್ ಆರ್ ವೃತ್ತದಲ್ಲಿ ಈ ಘಟನೆ ನಡೆದಿದೆ. ಕುಡಿತ ಮತ್ತಿನಲ್ಲಿ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದಾಗಿ ಕಾರು ಗುದ್ದಿದ ರಭಸಕ್ಕೆ ಲೈಟ್ ಕಂಬ ಯಾವಾಗ ಬೀಳುತ್ತೋ? ಎಂಬ ಭಯದಲ್ಲಿ ಸ್ಥಳೀಯರು ಬದುಕುತ್ತಿದ್ದಾರೆ. ಈಗ ಕಂಬ ದುರಸ್ಥಿ ಮಾಡದ ಕಾರಣಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಪಘಾತವಾಗಿ ಮೂರು ದಿನ ಕಳೆದರೂ ತಿರುಗಿ ನೋಡದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.