ಬೆಂಗಳುರು : ಬೇಸಿಗೆಯ ಬಿಸಿ ಜೊತೆಗೆ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯ ಶಾಕ್ ಎದುರಾಗಿದೆ. ಕೆಇಆರ್‌ಸಿ (KERC) ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲು ಆದೇಶ ಹೊರಡಿಸಿದ್ದು, ಈ ಹೊಸ ದರಗಳು ಮೇ ತಿಂಗಳ ಬಿಲ್ಲಿನಿಂದಲೇ ಅನ್ವಯವಾಗಲಿವೆ.

ಎಸ್ಕಾಂಗಳು ಸಲ್ಲಿಸಿದ್ದ ಪ್ರಸ್ತಾವನೆಯ ಮೇರೆಗೆ ಈ ದರ ಏರಿಕೆ ಜಾರಿಗೆ ಬಂದಿದೆ. 2024-25 ಆರ್ಥಿಕ ವರ್ಷದಲ್ಲಿ ನಿರೀಕ್ಷಿಸಿದ್ದ ಆದಾಯಕ್ಕಿಂತ ಕಡಿಮೆ ಸಂಗ್ರಹವಾಗಿರುವುದು ದರ ಏರಿಕೆಗೆ ಪ್ರಮುಖ ಕಾರಣವಾಗಿದೆ.

ಸುಮಾರು 34,084 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಿದ್ದರೂ, ಕೇವಲ 32,019 ಕೋಟಿ ರೂಪಾಯಿ ಮಾತ್ರ ಸಂಗ್ರಹವಾಗಿದ್ದು, 2,068 ಕೋಟಿ ರೂಪಾಯಿ ಕೊರತೆ ಉಂಟಾಗಿದೆ. ಈ ಕೊರತೆಯನ್ನು ಗ್ರಾಹಕರಿಂದಲೇ ಸಂಗ್ರಹಿಸಲು ಇಲಾಖೆ ಮುಂದಾಗಿದೆ. ಇದರಿಂದ ಸಾಮಾನ್ಯ ಗ್ರಾಹಕರ ಮೇಲೆ ಹೆಚ್ಚುವರಿ ಭಾರ ಬೀಳಲಿದ್ದು, ದರ ಏರಿಕೆಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!


















