ಬೆಂಗಳೂರು: ರಾಜಧಾನಿಯಲ್ಲಿ ವ್ಯಾಪಾಕ ಮಳೆಯಿಂದಾಗಿ ಎಲೆಕ್ಟ್ರಾನಿಕ್ ಸಿಟಿ ಪ್ಲೈ ಓವರ್ ಸಂಚಾರ ಬಂದ್ ಮಾಡಲಾಗಿದೆ.
ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಫ್ಲೈ ಓವರ್ ರಸ್ತೆಯಲ್ಲಿ ನೀರು ನಿಂತಿದೆ. ಈ ಹಿನ್ನೆಲೆಯಲ್ಲಿ ಫ್ಲೈ ಓವರ್ ಸಂಚಾರ ಬಂದ್ ಮಾಡಲಾಗಿದೆ. ಈ ಫ್ಲೈ ಓವರ್ ಎಲೆಕ್ಟ್ರಾನಿಕ್ ಸಿಟಿ, ಬೊಮ್ಮನಹಳ್ಳಿಗೆ ಸಂಪರ್ಕ ಕಲ್ಪಿಸುತ್ತದೆ. ಬಂದ್ ಮಾಡಿದ್ದರ ಹಿನ್ನೆಲೆಯಲ್ಲಿ ಫ್ಲೈ ಓವರ್ ಕೆಳ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನ ಸವಾರರು ಪರದಾಟ ನಡೆಸುವಂತಾಗಿದೆ.