‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದಲ್ಲಿ ಹಲವು ಕಲಾವಿದರು ನಟಿಸುತ್ತಿದ್ದಾರೆ. ಸಿನಿಮಾದ ಬಿಡುಗಡೆಗೆ ಇನ್ನೂ ಹಲವು ದಿನಗಳು ಬಾಕಿ ಇವೆ. ಈಗಾಗಲೇ ಸಿನಿಮಾದ ಪ್ರಚಾರವನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ಪಾತ್ರಗಳ ಪರಿಚಯವನ್ನು ಒಂದೊಂದಾಗಿಯೇ ಮಾಡಲಾಗುತ್ತಿದೆ.
ಯಶ್ ಜೊತೆ ಪರಭಾಷೆ ಕಲಾವಿದರ ದಂಡೇ ಈ ಸಿನಿಮಾದಲ್ಲಿ ಇರಲಿದೆ. ಕಿಯಾರಾ ಅಡ್ವಾಣಿ, ಹುಮಾ ಖುರೇಶಿ ಮುಂತಾದವರು ಈ ಸಿನಿಮಾದಲ್ಲಿದ್ದಾರೆ. ಈಗ ಹುಮಾ ಖುರೇಷಿ ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ.

ಹುಮಾ ಖುರೇಷಿ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಎಲಿಜಬೆತ್ ಎಂಬ ಪಾತ್ರ ಮಾಡುತ್ತಿದ್ದಾರೆ. ಹೆಸರಿಗೆ ತಕ್ಕಂತೆಯೇ ಈ ಪಾತ್ರ ಸಖತ್ ರಿಚ್ ಆಗಿರಲಿದೆ. ರೆಟ್ರೋ ಕಾಲದ ಐಷಾರಾಮಿ ಕಾರಿನ ಎದುರಿನಲ್ಲಿ ಗ್ಲಾಮರಸ್ ಡ್ರೆಸ್ ಧರಿಸಿ ನಿಂತಿರುವ ಹುಮಾ ಖುರೇಷಿ ಅವರ ಲುಕ್ ಗಮನ ಸೆಳೆಯುತ್ತಿದೆ. ಇದನ್ನು ನೋಡಿದ ಬಳಿಕ ಅಭಿಮಾನಿಗಳ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ.
ಬಾಲಿವುಡ್ನಲ್ಲಿ ಸಾಕಷ್ಟು ಹೆಸರು ಮಾಡಿರುವ ಹುಮಾ ಖುರೇಷಿ ಅವರಿಗೆ ಈಗ 39 ವರ್ಷ ವಯಸ್ಸು. ಸಿನಿಮಾಗಳಲ್ಲಿ ಮಾತ್ರವಲ್ಲದೇ ವೆಬ್ ಸಿರೀಸ್ಗಳಲ್ಲಿ ಕೂಡ ನಟಿಸಿ ಅವರು ಫೇಮಸ್ ಆಗಿದ್ದಾರೆ. ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿದೆ. ಆ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತೆ ಆಗಿದೆ. ಈ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ.
ಇದನ್ನೂ ಓದಿ : ಲವ್-ಸೆಕ್ಸ್ ದೋಖಾ | ಮದುವೆಯಾಗಿದ್ರೂ ಮತ್ತೊಬ್ಬ ಯುವತಿ ಜೊತೆ ಲವ್ವಿ ಡವ್ವಿ.. ವಂಚಕ ಅರೆಸ್ಟ್



















