ಭಾರತೀಯ ಮಹಿಳಾ ತಂಡದ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ್ತಿ ಎಲ್ಲಿಸ್ ಪೆರ್ರಿ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕಿ ತಹ್ಲಿಯಾ ಮೆಕ್ಗ್ರಾಥ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಫೋಬೆ ಲಿಚ್ಫೀಲ್ಡ್ ಹಾಗೂ ಜಾರ್ಜಿಯಾ ವೊಲ್ ಭರ್ಜರಿ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್ ಗೆ ಬರೋಬ್ಬರಿ 130 ರನ್ ಗಳ ಜೊತೆಯಾಟ ನೀಡಿತು.
ಫೋಬೆ ಲಿಚ್ಫೀಲ್ಡ್ (60) ರನ್ ಗೆ ಔಟ್ ಆದರು. ಇನ್ನೊಂದೆಡೆ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ ಜಾರ್ಜಿಯಾ ವೊಲ್ 87 ಎಸೆತಗಳಲ್ಲಿ 101 ರನ್ ಗಳಿಸಿದರು. ಆನಂತರ ಬಂದ ಎಲ್ಲಿಸ್ ಪೆರ್ರಿ ಅಬ್ಬರದ ಬ್ಯಾಟಿಂಗ್ ಮುಂದುವರೆಸಿದರು. ಕೇವಲ 72 ಎಸೆತಗಳಲ್ಲಿ ಶತಕ ಗಳಿಸಿದರು. ಹೀಗಾಗಿ ಆಸ್ಟ್ರೇಲಿಯಾ ತಂಡವು 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 371 ರನ್ ಗಳಿಸಿತು.