ಬೆಂಗಳೂರು ಗ್ರಾಮಾಂತರ: ಹಿಂದೂ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗವಾಗಿದೆ. ಚಕ್ರವರ್ತಿ ಸೂಲಿಬೆಲೆ ಅವರ ತಂದೆ ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ದೇವದಾಸ್ ಸುಬ್ರಾಯ ಶೇಟ್ (85) ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ದೇವದಾಸ್ ಅವರು ಕಳೆದ ಕೆಲವು ದಿನಗಳಿಂದ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದರು. ತಂದೆಯ ಅಗಲಿಕೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಇಂದು ಸೂಲಿಬೆಲೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂತ್ರಾಲಯಕ್ಕೆ ತೆರಳಿದ್ದ ಚಕ್ರವರ್ತಿ ಸೂಲಿಬೆಲೆ ಪಿತೃ ವಿಯೋಗದಿಂದ ಮನೆಗೆ ಮರಳಿದ್ದಾರೆ. ಸೂಲಿಬೆಲೆಯಲ್ಲೇ ಅಂತಿಮ ಸಂಸ್ಕಾರ ನಡೆಯಲಿದೆ ಎನ್ನಲಾಗಿದೆ.