ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿಯೋಜನೆ ಅಡಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸುಮಾರು 6 ತಿಂಗಳಿನಿಂದ ವೇತನ ಬಂದಿಲ್ಲ ಎನ್ನಲಾಗಿದೆ. ಹೀಗಾಗಿ ನೌಕರರು ಉದ್ಯೋಗ ನಿಲ್ಲಿಸಿ ಅಸಹಕಾರ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಸಂಬಳ ನೀಡದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ 40, ಮಂಗಳೂರಿನಲ್ಲಿ 65 ಜನರನ್ನು ಸೇರಿ ರಾಜ್ಯದಲ್ಲಿ ಸುಮಾರು 3500 ನೌಕರರು ತೊಂದರೆಗೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರವು ನೌಕರರ ವೇತನ ಈಗಾಗಲೇ ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರದಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದ ವೇತನ ನೀಡುತ್ತಿಲ್ಲ. ಇದು ಕಾರ್ಮಿಕರ ಬದುಕಿಗೆ ಕೊಳ್ಳೆ ಇಡುವಂತಾಗಿದೆ. ಆದರೆ, ಕೂಲಿಯನ್ನೇ ನಂಬಿರುವ ಕಾರ್ಮಿಕರು ಸಂಕಷ್ಟ ಪಡುತ್ತಿದ್ದಾರೆ. ಕೂಡಲೇ ನಮ್ಮ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ರಾಜ್ಯನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ನಿರ್ಣಯದಂತೆ ಅಸಹಕಾರ ಪ್ರತಿಭಟನೆ ಆರಂಭಿಸಿದ್ದಾರೆ



















