ಗದಗ: ಲಾಡ್ಜ್ ವೊಂದರಲ್ಲಿ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಗದಗನ ಪಲ್ಲವಿ ಲಾಡ್ಜ್ ನಲ್ಲಿ ನಡೆದಿದೆ. ನಗರದ ನಿವಾಸಿಯಾಗಿರುವ ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡಿರುವ ಇಂಜಿನಿಯರ್. ಶಂಕರಗೌಡ ಪಾಟೀಲ್ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದರು. ಆದರೆ, ಅವರ ಆತ್ಮಹತ್ಯೆ ಹಲವಾರು ಅನುಮಾನಗಳಿಗೆ ದಾರಿ ಮಾಡಿ ಕೊಟ್ಟಿದೆ.
ಮೃತ ಸಹೋದರ ಕೃಷ್ಣಗೌಡ ಈ ಕುರಿತು ಮಾತನಾಡಿದ್ದು, ನನ್ನ ಸಹೋದರನನ್ನು ನೇಣು ಹಾಕಿ ಕೊಲೆ ಮಾಡಿದ್ದಾರೆ. ಅವರಿಗೆ ಯಾವುದೇ ಸಾಲ ಇಲ್ಲ. ಸಾಕಷ್ಟು ಆಸ್ತಿ ಇದೆ. ಜಿಲ್ಲಾಧಿಕಾರಿಗಳ ಅಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಪ್ರಮೋಶನ ಸೇರಿದಂತೆ ಬೇರೆ ಯಾವುದಾದರೂ ಕಾರಣಕ್ಕೆ ಈ ಘಟನೆ ನಡೆದಿರಬಹುದು. ಯಾರಾದರೂ ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕಕ್ತಪಡಿಸಿದ್ದಾರೆ.