ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದಲ್ಲಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO Recruitment 2025) ಖಾಲಿ ಇರುವ 111 ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಡಿಟರ್, ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್ 17 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹುದ್ದೆಗಳ ವಿವರ
ಹುದ್ದೆ ಹೆಸರು: ಆಡಿಟರ್, ಜೂನಿಯರ್ ಎಂಜಿನಿಯರ್
ಒಟ್ಟು ಹುದ್ದೆ: 111
ಉದ್ಯೋಗ ಸ್ಥಳ: ದೇಶಾದ್ಯಂತ ಇರುವ ಇಪಿಎಫ್ಒ ಕಚೇರಿಗಳು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 17
ಜುಲೈ 18ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಡಿಪ್ಲೋಮಾ, ಬಿ.ಇ., ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರ ಗರಿಷ್ಠ ವಯೋಮಿತಿಯನ್ನು 56 ವರ್ಷ ಎಂದು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 35,400-2,08,700 ರೂಪಾಯಿ ವೇತನ ನೀಡಲಾಗುತ್ತದೆ. ಶಾರ್ಟ್ ಲಿಸ್ಟ್, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ https://www.epfindia.gov.in/site_en/index.php ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿಯ ಅಧಿಸೂಚನೆಯನ್ನು ಓದಬೇಕು. ಬಳಿಕ ಆನ್ ಲೈನ್ ಮೂಲಕವೇ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ Shri Deepak Arya, Regional Provident Fund Commissioner-II (Recruitment Division), Plate A, Ground Floor, Block II, East Kidwai Nagar, New Delhi-110023 ವಿಳಾಸಕ್ಕೆ ಕಳುಹಿಸಬೇಕು.