ಬೆಂಗಳೂರು ; ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಪಿಂಚಣಿ, ಹೂಡಿಕೆ ಸುರಕ್ಷತೆ ನೀಡುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯಲ್ಲಿ (ಇಪಿಎಫ್ಒ) ಖಾಲಿ ಇರುವ 74 ಹುದ್ದೆಗಳ ನೇಮಕಾತಿಗಾಗಿ (EPFO Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಆಡಿಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (EPFO)
ಒಟ್ಟು ಹುದ್ದೆಗಳು: 74
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್ ಅಥವಾ ಆಫ್ ಲೈನ್
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಹುದ್ದೆಗಳ ಹೆಸರು: ಆಡಿಟರ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 30
ಕರ್ನಾಟಕ ಸೇರಿ ದೇಶಾದ್ಯಂತ ಇರುವ ಇಪಿಎಫ್ಒ ಕಚೇರಿಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಕರ್ನಾಟಕದ ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಉದ್ಯೋಗಾವಕಾಶಗಳು ಇವೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಕಾಂ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ 56 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ epfindia.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ epfindia.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಶ್ರೀ ವಿಕ್ರಮ್ ಸಿಂಗ್, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ-II (ನೇಮಕಾತಿ ವಿಭಾಗ), ಪ್ಲೇಟ್ ಎ, ನೆಲ ಮಹಡಿ, ಬ್ಲಾಕ್-II, ಈಸ್ಟ್ ಕಿದ್ವಾಯಿ ನಗರ, ನವದೆಹಲಿ – 110023 ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಇದನ್ನೂ ಓದಿ : PPF, ಸುಕನ್ಯಾ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ಘೋಷಿಸಿದ ಕೇಂದ್ರ ; ಇಲ್ಲಿದೆ ಪಟ್ಟಿ



















