ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎಜ್ಯುಕೇಷನ್ ಆ್ಯಂಡ್ ರಿಸರ್ಚ್ ನೆಟ್ ವರ್ಕ್ ಇಂಡಿಯಾ (ERNET India Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ವಿದ್ಯಾರ್ಹತೆ ಏನು ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ಎಜ್ಯುಕೇಷನ್ ಆ್ಯಂಡ್ ರಿಸರ್ಚ್ ನೆಟ್ ವರ್ಕ್ ಇಂಡಿಯಾ
ಒಟ್ಟು ಹುದ್ದೆಗಳು: 04
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 16
ಉದ್ಯೋಗ ಸ್ಥಳ: ತಮಿಳುನಾಡಿನ ಚೆನ್ನೈ, ಕರ್ನಾಟಕದ ಬೆಂಗಳೂರು
ಲೆವೆಲ್ 1 ಹಂತದ ಮೂವರು ಪ್ರಾಜೆಕ್ಟ್ ಮ್ಯಾನೇಜರ್, ಲೆವೆಲ್ 2 ಹಂತದ ಒಬ್ಬ ಪ್ರಾಜೆಕ್ಟ್ ಮ್ಯಾನೇಜರ್ ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಬಿ.ಇ, ಬಿ.ಟೆಕ್, ಎಂಸಿಎ, ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 63 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.25 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
“ಅರ್ಜಿ ಸಲ್ಲಿಸುವುದು ಹೇಗೆ”?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ ernet.in ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿಯ ಅಧಿಸೂಚನೆಯನ್ನು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಇದೇ ವೆಬ್ ಸೈಟ್ ನಲ್ಲಿ ಅರ್ಜಿಯನ್ನು ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು hari.krishna@ernet.in ಅಥವಾ anupam@ernet.in ಇ-ಮೇಲ್ ಐಡಿಗಳಿಗೆ ನಿಗದಿತ ದಿನಾಂಕದೊಳಗೆ ಮೇಲ್ ಮಾಡಬೇಕು.